ಉಗ್ರರ ಅಡಗುತಾಣಗಳ ಮೇಲೆ ದಾಳಿ: ಭಾರೀ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಂಡ ಸೇನೆ

ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರ್ ಪ್ರದೇಶದಲ್ಲಿದ್ದ ಉಗ್ರ ಅಡುತಾಣಗಳ ಮೇಲೆ ಭಾರತೀಯ ಸೇನೆ ದಾಳಿ ನಡೆಸಿದ್ದು, ಭಾರೀ ಪ್ರಮಾಣದ ಸ್ಫೋಟಕ ಸಾಮಾಗ್ರಿಗಳು ಹಾಗೂ ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆದುಕೊಂಡಿರುವುದಾಗಿ ಮಂಗಳವಾರ...
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಜಮ್ಮು: ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರ್ ಪ್ರದೇಶದಲ್ಲಿದ್ದ ಉಗ್ರ ಅಡುತಾಣಗಳ ಮೇಲೆ ಭಾರತೀಯ ಸೇನೆ ದಾಳಿ ನಡೆಸಿದ್ದು, ಭಾರೀ ಪ್ರಮಾಣದ ಸ್ಫೋಟಕ ಸಾಮಾಗ್ರಿಗಳು ಹಾಗೂ ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆದುಕೊಂಡಿರುವುದಾಗಿ ಮಂಗಳವಾರ ತಿಳಿದುಬಂದಿದೆ.

ಗಣರಾಜ್ಯೋತ್ಸವ ದಿನಕ್ಕೆ ಇನ್ನು ಎರಡು ದಿನಗಳು ಬಾಕಿಯಿದ್ದು, ಈ ಹಿನ್ನಲೆಯಲ್ಲಿ ಉಗ್ರರು ವಿಧ್ವಂಸಕ ಕೃತ್ಯವೆಸಗುವ ಸಲುವಾಗಿ ಸ್ಫೋಟಕ ಹಾಗೂ ಶಸ್ತ್ರಾಸ್ತ್ರಗಳನ್ನು ಸಂಗ್ರಹಿಸಲಾಡಿದೆ ಎಂದು ಮೂಲಗಳು ತಿಳಿಸಿವೆ.

ಈ ಬಗ್ಗೆ ಗುಪ್ತಚರ ಇಲಾಖೆ ನೀಡಿದ ಖಚಿತ ಮಾಹಿತಿ ಮೇರೆಗೆ ಹಿಲ್ನಾರ್ ಪ್ರದೇಶದ ಚ್ಛತ್ರು ತೆಹ್ಸಿಲ್ ಎಂಬಲ್ಲಿ ಜಮ್ಮು ಮತ್ತು ಕಾಶ್ಮೀರದ ಪೊಲೀಸರೊಂದಿಗೆ ಭಾರತೀಯ ಸೇನೆ ಕಾರ್ಯಾಚರಣೆಗಿಳಿದಿತ್ತು ಎಂದು ರಕ್ಷಣಾ ವಕ್ತಾರರು ಹೇಳಿದ್ದಾರೆ.

ಕಾರ್ಯಾಚರಣೆ ವೇಳೆ ಭಾರತೀಯ ಸೇನೆ ಭಾರೀ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಂಡಿದೆ 1 ಎಕೆ-47, 1 ಪಿಸ್ತೂಲ್ ಜೊತೆಗೆ 1 ಚೀನಾದ ನಿಯತಕಾಲಿಕೆ, ಬ್ಯಾರೆಲ್ ಗ್ರೆನೇಡ್ ಲಾಂಚರ್, 7 ಗ್ರೇನೇಡ್ ಗಳು, 2 ಚೀನಾ ಮೂಲದ ಗ್ರೇನೇಡ್ ಗಳು, 3 ಎಕೆ-47 ನಿಯತಕಾಲಿಕೆಗಳು, 428 ಸುತ್ತಿನ 7.62 ಎಂಎಂ ಎಕೆ.47 ಮತ್ತು 2 ಕೆನ್ವುಡ್ ರೇಡಿಯೋ ಸೆಟ್ ಗಳನ್ನು ಸೇನೆ ವಶಕ್ಕೆ ಪಡೆದುಕೊಂಡಿದೆ ಎಂದು ತಿಳಿದುಬಂದಿದೆ.

ಜನವರಿ 26 ರಂದು ಗಣರಾಜ್ಯೋತ್ಸವ ದಿನವನ್ನು ಆಚರಿಸಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಉಗ್ರರು ದಾಳಿ ನಡೆಸಲು ಸಂಚು ರೂಪಿಸಿ ಶಸ್ತ್ರಾಸ್ತ್ರಗಳನ್ನು ಸಂಗ್ರಹ ಮಾಡಿಟ್ಟುಕೊಂಡಿದ್ದಾರೆ. ದೇಶದ ಶಾಂತಿ ಕದಡಲು ಈ ರೀತಿಯ ಉಗ್ರರು ಯೋಜನೆ ರೂಪಿಸುತ್ತಿದ್ದಾರೆಂದು ಸೇನಾ ವಕ್ತಾರರು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com