ರಾಷ್ಟ್ರೀಯ ಹೆಣ್ಣು ಮಗುವಿನ ದಿನ: ಲಿಂಗ ಸಮಾನತೆಗೆ ಪ್ರಧಾನಿ ಮೋದಿ ಕರೆ

ಜನವರಿ 24 ರಾಷ್ಟ್ರೀಯ ಹೆಣ್ಣು ಮಗುವಿನ ದಿನ. ಈ ಸಂದರ್ಭದಲ್ಲಿ ದೇಶದ ಜನತೆಗೆ ಕರೆ ನೀಡಿದ ಪ್ರಧಾನ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
ನವದೆಹಲಿ: ಜನವರಿ 24 ರಾಷ್ಟ್ರೀಯ ಹೆಣ್ಣು ಮಗುವಿನ ದಿನ. ಈ ಸಂದರ್ಭದಲ್ಲಿ ದೇಶದ ಜನತೆಗೆ ಕರೆ ನೀಡಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ, ಲಿಂಗ ಅಸಮಾನತೆ ಬಗ್ಗೆ ಈಗಲೂ ಜನರಲ್ಲಿರುವ ತಾರತಮ್ಯ ಮನೋಭಾವವನ್ನು ಬದಿಗೊತ್ತಿ ಲಿಂಗ ಸಮಾನತೆಗೆ ಬದ್ಧರಾಗಿರಬೇಕೆಂದು ಕರೆ ನೀಡಿದರು.
ಟ್ವಿಟ್ಟರ್ ನಲ್ಲಿ ಅವರು, ರಾಷ್ಟ್ರೀಯ ಹೆಣ್ಣು ಮಗುವಿನ ದಿನ, ಹೆಣ್ಣು ಮಕ್ಕಳ ಅದ್ವಿತೀಯ ಸಾಧನೆಯನ್ನು ಆಚರಿಸುವ ದಿನವಾಗಿದೆ. ಅವರು ಹಲವು ಕ್ಷೇತ್ರಗಳಲ್ಲಿ ಮಾಡುವ ಸಾಧನೆಗಳಿಂದ ದೇಶ ಹೆಮ್ಮೆ ಪಡುವಂತಾಗಿದೆ ಎಂದರು.
ಹೆಣ್ಣು ಮಕ್ಕಳು ಕೀಳು ಎಂದು ತಾರತಮ್ಯ ಮಾಡುವುದನ್ನು ಮೊದಲು ನಿಲ್ಲಿಸಿ ಅವರಿಗೂ ಸಮಾನ ಅವಕಾಶ ಕಲ್ಪಿಸಬೇಕು ಎಂದಿದ್ದಾರೆ.
ಕೇಂದ್ರ ಸರ್ಕಾರ 2008ರಲ್ಲಿ ಜನವರಿ 24ನ್ನು  ರಾಷ್ಟ್ರೀಯ ಹೆಣ್ಣು ಮಕ್ಕಳ ದಿನವನ್ನಾಗಿ ಘೋಷಿಸಿತು. ಹೆಣ್ಣು ಮಕ್ಕಳನ್ನು ಸಮಾಜದಲ್ಲಿ ಸಮಾನತೆಯಿಂದ ಕಂಡು ಅವರಿಗೂ ಮೌಲ್ಯ, ಗೌರವವನ್ನು ತೋರಿಸುವ ಸಲುವಾಗಿ ಆ ಭಾವನೆ ಜನರಲ್ಲಿ ಮೂಡಿಸಲು ಹೆಣ್ಣು ಮಕ್ಕಳ ದಿನವನ್ನು ಆಚರಿಸಲಾಗುತ್ತಿದೆ.
ದೆಹಲಿಯಲ್ಲಿ ಇಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವಾಲಯ ಕಳೆದ ವರ್ಷ ವಿವಿಧ ಕ್ಷೇತ್ರಗಳಲ್ಲಿ ಅದ್ವಿತೀಯ ಸಾಧನೆ ತೋರಿದ ಹೆಣ್ಣು ಮಕ್ಕಳನ್ನು ಗೌರವಿಸಲಿದ್ದು ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com