ಪಣಜಿ: ಚುನಾವಣೆಗೆ ಸಜ್ಜಾಗಿರುವ ಗೋವಾ ರಾಜ್ಯಕ್ಕೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರನ್ನು ಬಿಜೆಪಿ ಮುಖ್ಯಮಂತ್ರಿ ಅಭ್ಯರ್ಥಿಯನ್ನಾಗಿ ಘೋಷಿಸಲಾಗುತ್ತದೆ ಎಂಬ ಊಹಾಪೋಹಗಳ ನಡುವೆ ನಿನ್ನೆ ಪ್ರತಿಕ್ರಿಯೆ ನೀಡಿದ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ, ರಾಜ್ಯದಲ್ಲಿ ಮುಂದಿನ ಸರ್ಕಾರ ಸಚಿವ ಮನೋಹರ್ ಪರಿಕ್ಕರ್ ಅವರ ನಾಯಕತ್ವದಲ್ಲಿ ಕಾರ್ಯನಿರ್ವಹಿಸಲಿದೆ ಎಂದು ಸ್ಪಷ್ಟಪಡಿಸಲಿದ್ದಾರೆ.