ಲಖನೌ: ಯಾದವ್ ಕುಟುಂಬ ಕಲಹ ಮುಂದುವರೆದಿದ್ದು, ಸಮಾಜವಾದಿ ಪಕ್ಷದ ನೂತನ ಮುಖ್ಯಸ್ಥ ಹಾಗೂ ಉತ್ತರ ಪ್ರದೇಶ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅವರು ಮಂಗಳವಾರ ಬಿಡುಗಡೆ ಮಾಡಿರುವ ಪಕ್ಷದ ಸ್ಚಾರ್ ಪ್ರಚಾರಕರ ಪಟ್ಟಿಯಿಂದ ತಮ್ಮ ಶತ್ರು ಚಿಕ್ಕಪ್ಪ ಶಿವಪಾಲ್ ಯಾದವ್ ಅವರನ್ನು ಕೈಬಿಟ್ಟಿದ್ದಾರೆ.
ಆಡಳಿತರೂಢ ಪಕ್ಷ ಇಂದು 40 ಮಂದಿಯನ್ನೊಳಗೊಂಡ ಸ್ಟಾರ್ ಪ್ರಚಾರಕರ ಪಟ್ಟಿಯನ್ನು ಚುನಾವಣಾ ಆಯೋಗಕ್ಕೆ ಸಲ್ಲಿಸಿದೆ.
ಪಕ್ಷದ ಪೋಷಕ ಮುಲಾಯಂ ಸಿಂಗ್ ಯಾದವ್, ಅಖಿಲೇಶ್ ಯಾದವ್ ಹಾಗೂ ಇತರೆ 14 ಸ್ಟಾರ್ ಪ್ರಚಾರಕರನ್ನೊಳಗೊಂಡ ಪಟ್ಟಿಯನ್ನು ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಮ್ ಗೋಪಾಲ್ ಯಾದವ್ ಅವರು ಆಯೋಗಕ್ಕೆ ಸಲ್ಲಿಸಿದ್ದಾರೆ.
ಕಳೆದ ಭಾನುವಾರ ಅಖಿಲೇಶ್ ಯಾದವ್ ಅವರು ಪಕ್ಷದ ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡಿದ್ದರು. ಈ ವೇಳೆಯೂ ಶಿವಪಾಲ್ ಯಾದವ್ ಹಾಗೂ ಮುಲಾಯಂ ಸಿಂಗ್ ಯಾದವ್ ಗೈರು ಆಗಿದ್ದರು.