ಸರ್ಜಿಕಲ್ ಸ್ಟ್ರೈಕ್ ನಲ್ಲಿ ಭಾಗವಹಿಸಿದ್ದ ಯೋಧರಿಗೆ ಶೌರ್ಯ ಪ್ರಶಸ್ತಿ

ಗಣರಾಜ್ಯೋತ್ಸವ ಸಂದರ್ಭದಲ್ಲಿ, ಕಳೆದ ವರ್ಷ ಸರ್ಜಿಕಲ್ ದಾಳಿಯಲ್ಲಿ ಪಾಲ್ಗೊಂಡ 4 ಮತ್ತು 9 ಪಾರಾ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on: 
ನವದೆಹಲಿ: ಗಣರಾಜ್ಯೋತ್ಸವ ಸಂದರ್ಭದಲ್ಲಿ, ಕಳೆದ ವರ್ಷ ಸರ್ಜಿಕಲ್ ದಾಳಿಯಲ್ಲಿ ಪಾಲ್ಗೊಂಡ 4 ಮತ್ತು 9 ಪಾರಾ ವಿಶೇಷ ಪಡೆಯ ಕಮಾಂಡಿಂಗ್ ಅಧಿಕಾರಿಗಳಿಗೆ ಯುದ್ಧ ಸೇವಾ ಪದಕವನ್ನು ಕೇಂದ್ರ ಸರ್ಕಾರ ನೀಡಿದೆ.
4 ಪಾರಾ ಪಡೆಯ ಮೇಜರ್ ಮೊಹಿತ್ ಸೂರಿ ಅವರಿಗೆ ಕೀರ್ತಿ ಚಕ್ರ ಮತ್ತು ಇತರ ಐವರು ಭದ್ರತಾ ಸಿಬ್ಬಂದಿಗೆ ಶೌರ್ಯ ಚಕ್ರ ಘೋಷಿಸಲಾಗಿದೆ.ಯುದ್ಧದಲ್ಲಿ ಭಾಗವಹಿಸಿದವರಿಗೆ ನೀಡುವ ಶೌರ್ಯ ಪ್ರಶಸ್ತಿ ಇವಾಗಿದೆ.
ಕಳೆದ ವರ್ಷ ಸೆಪ್ಟೆಂಬರ್ ನಲ್ಲಿ ಜಮ್ಮು-ಕಾಶ್ಮೀರದ ಉರಿ ಪ್ರಾಂತ್ಯದಲ್ಲಿ ಗಡಿ ನಿಯಂತ್ರಣ ರೇಖೆ ಬಳಿಯ ಭಯೋತ್ಪಾದಕರ ಲಾಂಚ್ ಪಾಡ್ ಮೇಲೆ ಸೇನಾ ಯೋಧರು ಸರ್ಜಿಕಲ್ ಸ್ಟ್ರೈಕ್ ನಡೆಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com