ಉತ್ತರಪ್ರದೇಶ ಚುನಾವಣೆ ಬಳಿಕ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ: ಬಿಜೆಪಿ

ಪಂಚ ರಾಜ್ಯಗಳ ಚುನಾವಣೆ ಹತ್ತಿರಬರುತ್ತಿದ್ದಂತೆಯೇ ಮತ್ತೆ ಅಯೋಧ್ಯೆ ರಾಮ ಮಂದಿರ ನಿರ್ಮಾಣ ಸುದ್ದಿಗೆ ಬಂದಿದ್ದು, ಉತ್ತರಪ್ರದೇಶ ಚುನಾವಣೆ ಮುಕ್ತಾಯಗೊಂಡ ಬಳಿಕ ಅಯೋಧ್ಯೆಯಲ್ಲಿ ರಾಮ ಮಂದಿರವನ್ನು ನಿರ್ಮಾಣ ಮಾಡುತ್ತೇವೆಂದು ಬಿಜೆಪಿ ನಾಯಕರೊಬ್ಬರು...
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ನವದೆಹಲಿ: ಪಂಚ ರಾಜ್ಯಗಳ ಚುನಾವಣೆ ಹತ್ತಿರಬರುತ್ತಿದ್ದಂತೆಯೇ ಮತ್ತೆ ಅಯೋಧ್ಯೆ ರಾಮ ಮಂದಿರ ನಿರ್ಮಾಣ ಸುದ್ದಿಗೆ ಬಂದಿದ್ದು, ಉತ್ತರಪ್ರದೇಶ ಚುನಾವಣೆ ಮುಕ್ತಾಯಗೊಂಡ ಬಳಿಕ ಅಯೋಧ್ಯೆಯಲ್ಲಿ ರಾಮ ಮಂದಿರವನ್ನು ನಿರ್ಮಾಣ ಮಾಡುತ್ತೇವೆಂದು ಬಿಜೆಪಿ ಮಂಗಳವಾರ ಹೇಳಿದೆ.

ಕೆಲ ದಿನಗಳ ಹಿಂದಷ್ಟೇ ಚುನಾವಣೆ ಕುರಿತಂತೆ ಹೇಳಿಕೆ ನೀಡಿದ್ದ ಅಖಿಲ ಭಾರತೀಯ ಅಖರ ಪರಿಷತ್, ಬಿಜೆಪಿಗಾಗಲೂ ಅಥವಾ ವಿಶ್ವ ಹಿಂದೂ ಪರಿಷತ್'ಗಾಗಲೀ ನಾವು ಬೆಂಬಲ ನೀಡುವುದಿಲ್ಲ ಎಂದು ಹೇಳಿತ್ತು.

ಈ ಹಿನ್ನಲೆಯಲ್ಲಿ ಹೇಳಿಕೆ ನೀಡಿರುವ ಉತ್ತರಪ್ರದೇಶ ಬಿಜೆಪಿ ಪಕ್ಷದ ಅಧ್ಯಕ್ಷ ಕೇಶವ್ ಪ್ರಸಾದ್ ಮೌರ್ಯ ಅವರು, ರಾಮ ಮಂದಿರ ವಿಚಾರ ಚುನಾವಣಾ ವಿಚಾರದಲ್ಲ. ನಂಬಿಕೆಯ ವಿಚಾರವಾಗಿದೆ. ಬಿಜೆಪಿಗೆ ಪವಿತ್ರ ಪುರುಷರ ಬೆಂಬಲ ಹಾಗೂ ಆಶೀರ್ವಾದವಿದೆ. ರಾಮ ಮಂದಿರವನ್ನು ಕೇವಲ ಎರಡು ತಿಂಗಳಿನಲ್ಲಿ ನಿರ್ಮಾಣ ಮಾಡಲು ಸಾಧ್ಯವಿಲ್ಲ. ಆದರೆ, ಚುನಾವಣೆ ಅಂತ್ಯಗೊಂಡ ಬಳಿಕ ನಿರ್ಮಾಣ ಮಾಡಲಾಗುತ್ತದೆ ಎಂದು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com