ಆಮ್ ಆದ್ಮಿ ಪಕ್ಷ ಹಾಗೂ ಶಿರೋಮಣಿ ಅಕಾಲಿದಳ ಪಕ್ಷಗಳನ್ನು ಮೂಲಭೂತವಾದಿ ಸಿದ್ಧಾಂತಗಳನ್ನು ಹೊಂದಿರುವ ಪಕ್ಷಗಳೆಂದು ಹೇಳಿರುವ ಅಮರಿಂದರ್ ಸಿಂಗ್, ಎಚ್ಚರಿಕೆಯಿಂದ ಮತ ಚಲಾವಣೆ ಮಾಡುವಂತೆ ರಾಜ್ಯದ ಜನತೆಗೆ ಕರೆ ನೀಡಿದ್ದಾರೆ. ಅಕಾಲಿದಳದವರು 10 ವರ್ಷಗಳಿಂದ ಪಂಜಾಬ್ ರಾಜ್ಯವನ್ನು ಲೂಟಿ ಮಾಡುತ್ತಿದ್ದರೆ ಆಮ್ ಆದ್ಮಿ ಪಕ್ಷ ಪಂಜಾಬಿಯತ್ ನ್ನು ಹಾಳು ಮಾಡಲು ಹೊರಗಿನಿಂದ ಜನರನ್ನು ಕರೆಸಿದೆ ಎಂದು ಸಾರ್ವಜನಿಕ ಸಭೆಯಲ್ಲಿ ಆರೋಪಿಸಿದ್ದಾರೆ.