ಮಹಾರಾಷ್ಟ್ರ: ಸ್ಥಳೀಯ ಸಂಸ್ಥೆ ಚುನಾವಣೆಗೆ ಶಿವಸೇನೆ-ಎಂಎನ್ಎಸ್ ಮೈತ್ರಿ?
ಮಹಾರಾಷ್ಟ್ರದಲ್ಲಿ ಬಿಜೆಪಿ-ಶಿವಸೇನೆ ಮೈತ್ರಿ ಅಂತ್ಯಗೊಂಡಿರುವುದು ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಶಿವಸೇನೆ-ಮಹಾರಾಷ್ಟ್ರ ನವ ನಿರ್ಮಾಣ ಸೇನೆ ಮೈತ್ರಿಗೆ ಕಾರಣವಾಗಬಹುದು ಎಂದು ವಿಶ್ಲೇಷಿಸಲಾಗುತ್ತಿದೆ.
ಶಿವಸೇನೆ ನಾಯಕ ಉದ್ಧವ್ ಠಾಕ್ರೆ, ಎಂಎನ್ಎಸ್ ನಾಯಕ ರಾಜ್ ಠಾಕ್ರೆ
ನವದೆಹಲಿ: ಮಹಾರಾಷ್ಟ್ರದಲ್ಲಿ ಬಿಜೆಪಿ-ಶಿವಸೇನೆ ಮೈತ್ರಿ ಅಂತ್ಯಗೊಂಡಿರುವುದು ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಶಿವಸೇನೆ-ಮಹಾರಾಷ್ಟ್ರ ನವ ನಿರ್ಮಾಣ ಸೇನೆ ಮೈತ್ರಿಗೆ ಕಾರಣವಾಗಬಹುದು ಎಂದು ವಿಶ್ಲೇಷಿಸಲಾಗುತ್ತಿದೆ.
ಮೈತ್ರಿ ಕುರಿತು ಎಂಎನ್ಎಸ್-ಶಿವಸೇನೆ ನಡುವೆ ಮಾತುಕತೆ ನಡೆಯುತ್ತಿರುವುದರ ಬಗ್ಗೆ ಸ್ವತಃ ಎಂಎನ್ಎಸ್ ಶಿವಸೇನೆ ನಾಯಕರು ಪ್ರತಿಕ್ರಿಯೆ ನೀಡಿದ್ದು, ಮಾತುಕತೆ ಪ್ರಾಥಮಿಕ ಹಂತದಲ್ಲಿದೆ ಎಂದು ಹೇಳಿದ್ದಾರೆ. 177:50 ಅನುಪಾತದಲ್ಲಿ ಸೀಟು ಹಂಚಿಕೆ ನಡೆಯಲಿರುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ.
ನಾಸಿಕ್, ಪುಣೆ, ಥಾಣೆ ಸೇರಿದಂತೆ ಮುಂಬೈ ನ ಹೊರಗೆ ನಡೆಯಲಿರುವ 25 ಜಿಲ್ಲಾ ಪಂಚಾಯಿತಿ ಚುನಾವಣೆಗೆ ಮೈತ್ರಿ ನಡೆಯುವ ಸಾಧ್ಯತೆಗಳಿದೆ ಎಂದು ಹೇಳಲಾಗುತ್ತಿದೆ. ಒಂದೆರಡು ದಿನಗಳಲ್ಲಿ ಬಿಜೆಪಿ-ಶಿವಸೇನೆ ಮೈತ್ರಿಯ ಬಗ್ಗೆ ಸ್ಪಷ್ಟ ಚಿತ್ರಣ ಸಿಗಲಿದೆ.
ಬಿಜೆಪಿ ವಿರುದ್ಧ ಅಸಮಾಧಾನ ಹೊರಹಾಕಿದ್ದ ಶಿವಸೇನೆ ಅಧ್ಯಕ್ಷ ಉದ್ಧವ್ ಠಾಕ್ರೆ ಸ್ಥಳೀಯ ಸಂಸ್ಥೆ ಚುನಾವಣೆಗೆ ಬಿಜೆಪಿಯೊಂದಿಗಿನ ಮೈತ್ರಿಯನ್ನು ಅಂತ್ಯಗೊಳಿಸಿತ್ತು.