ಸಾವಿರಾರು ಮಂದಿ ವಿದ್ಯಾರ್ಥಿಗಳು, ತುಳು ಚಿತ್ರರಂಗದ ಕಲಾವಿದರು, ಜನಪ್ರತಿನಿಧಿಗಳು ಮಾನವ ಸರಪಳಿ ನಿರ್ಮಿಸಿ ಕಂಬಳದ ಪರ ಪ್ರತಿಭಟನೆ ನಡೆಸಿದ್ದಾರೆ. ಕಂಬಳ ಕ್ರೀಡೆಯನ್ನು ವಿರೋಧಿಸುತ್ತಿರುವ ಪೇಟಾ ಸಂಘಟನೆಯನ್ನು ನಿಷೇಧಿಸಬೇಕು ಎಂದು ಪ್ರತಿಭಟನಾ ನಿರತರು ಆಗ್ರಹಿಸಿದ್ದು, ಪೇಟಾ ಜಲ್ಲಿಕಟ್ಟು ಹಾಗೂ ಕಂಬಳದ ನಡುವಿನ ವ್ಯತ್ಯಾಸವನ್ನು ಅರ್ಥಮಾಡಿಕೊಳ್ಳಲು ವಿಫಲವಾಗಿದೆ ಎಂದು ಆರೋಪಿಸಿದ್ದಾರೆ.