ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಜಾರ್ಖಂಡ್; ಭಾರೀ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆದ ಪೊಲೀಸರು

ಜಾರ್ಖಂಡ್ ಲತೆಹಾರ್ ಜಿಲ್ಲೆಯಲ್ಲಿದ್ದ ನಕ್ಸಲರ ಅಡಗುತಾಣಗಳ ಮೇಲೆ ಪೊಲೀಸರು ದಾಳಿ ನಡೆಸಿದ್ದು, ಭಾರೀ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆದಿದ್ದಾರೆಂದು ಭಾನುವಾರ ತಿಳಿದುಬಂದಿದೆ...
Published on

ಲತೆಹಾರ್: ಜಾರ್ಖಂಡ್ ಲತೆಹಾರ್ ಜಿಲ್ಲೆಯಲ್ಲಿದ್ದ ನಕ್ಸಲರ ಅಡಗುತಾಣಗಳ ಮೇಲೆ ಪೊಲೀಸರು ದಾಳಿ ನಡೆಸಿದ್ದು, ಭಾರೀ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆದಿದ್ದಾರೆಂದು ಭಾನುವಾರ ತಿಳಿದುಬಂದಿದೆ.

ಖಚಿತ ಮಾಹಿತಿ ಆಧಾರದ ಮೇಲೆ ಲತೇಹಾರ್ ಜಿಲ್ಲೆಯಲ್ಲಿ ಪೊಲೀಸರು ಕಾರ್ಯಾಚರಣೆಗಿಳಿದ್ದರು. ಈ ವೇಳೆ ನಕ್ಸಲರ ಅಡುತಾಣಗಳು ಪತ್ತೆಯಾಗಿದ್ದು, ಸ್ಥಳದಲ್ಲಿ ಭಾರೀ ಪ್ರಮಾಣ ಶಸ್ತ್ರಾಸ್ತ್ರಗಳು ಹಾಗೂ ಸ್ಫೋಟಕ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆಂದು ಮೂಲಗಳು ತಿಳಿಸಿವೆ.

ಎಸ್ಎಲ್ಆರ್, ಅಮೆರಿಕ ಮೂಲಕ ಸೆಮಿ-ಆಟೋಮೆಟಿಕ್ ರೈಫಲ್, 2 ದೇಸೀ ನಿರ್ಮಿಕ ರೈಫಲ್ ಗಳು, 81 ಸಜೀವ ಕಾರ್ಟ್ರಿಜ್ಗಳು, ಶಸ್ತ್ರಾಸ್ತ್ರಗಳು ಹಾಗೂ ಸ್ಫೋಟಕ ವಸ್ತುಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಪ್ರಕರಣ ಸಂಬಂಧ ಪ್ರಸ್ತುತ ಪೊಲೀಸರು ತನಿಖೆ ನಡೆಸುತ್ತಿದ್ದು, ಈ ವರೆಗೂ ಯಾರನ್ನೂ ಬಂಧನಕ್ಕೊಳಪಡಿಸಲಾಗಿಲ್ಲ ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com