ಸಿದ್ದರಾಮಯ್ಯ ಸರ್ಕಾರ ನಡೆಸುತ್ತಿರುವ ರೀತಿಯಿಂದಾಗಿ ಎಸ್ಎಂ.ಕೃಷ್ಣ ಕಾಂಗ್ರೆಸ್ 'ಕೈ' ಬಿಟ್ಟರು: ಬಿಜೆಪಿ

ಕರ್ನಾಟಕದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರ ನಡೆಸುತ್ತಿರುವ ರೀತಿ ನೋಡಿ ಬೇಸರದಿಂದ ಎಸ್.ಎಂ.ಕೃಷ್ಣ ಅವರು ಕಾಂಗ್ರೆಸ್ ಕೈ ಬಿಟ್ಟಿದ್ದಾರೆಂದು ಬಿಜೆಪಿ ಭಾನುವಾರ ಹೇಳಿದೆ...
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on: 

ಬೆಂಗಳೂರು: ಕರ್ನಾಟಕದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರ ನಡೆಸುತ್ತಿರುವ ರೀತಿ ನೋಡಿ ಬೇಸರದಿಂದ ಎಸ್.ಎಂ.ಕೃಷ್ಣ ಅವರು ಕಾಂಗ್ರೆಸ್ ಕೈ ಬಿಟ್ಟಿದ್ದಾರೆಂದು ಬಿಜೆಪಿ ಭಾನುವಾರ ಹೇಳಿದೆ.

ಹಿರಿಯ ನಾಯಕ ಎಸ್.ಎಂ.ಕೃಷ್ಣ ಅವರು ರಾಜಕೀಯಕ್ಕೆ ನಿವೃತ್ತಿ ಘೋಷಿಸಿರುವ ಹಿನ್ನಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಬಿಜೆಪಿ ನಾಯಕ ಪಿ. ಪ್ರಕಾಶ್ ಅವರು, ಸಿದ್ದರಾಮಯ್ಯ ಅವರು ಸರ್ಕಾರ ನಡೆಸುತ್ತಿರುವ ರೀತಿ ನೋಡಿ ಬೇಸರದಿಂದ ಎಸ್.ಎಂ.ಕೃಷ್ಣ ಅವರು ಕಾಂಗ್ರೆಸ್ ಪಕ್ಷವನ್ನು ತೊರೆದಿದ್ದಾರೆ. ಮತದಾರರಿಗೆ ಹಾಗೂ ಕರ್ನಾಟಕದ ಜನತೆಗೆ ಇದು ತಪ್ಪು ಸಂದೇಶವನ್ನು ರವಾನಿಸುತ್ತದೆ ಎಂದು ಹೇಳಿದ್ದಾರೆ.

ಎಸ್.ಎಂ.ಕೃಷ್ಣ ಅವರು ಉತ್ತಮ ರಾಜಕೀಯ ವ್ಯಕ್ತಿಯಾಗಿದ್ದು, ಉತ್ತಮವಾದ ಗೌರವವನ್ನು ಸಂಪಾದನೆ ಮಾಡಿದ್ದರು. ನಗರಗಳಲ್ಲಿ ಸಾಕಷ್ಟು ಜನಪ್ರಿಯತೆಯನ್ನು ಗಳಿಸಿದ್ದರು. ಇಂತಹ ವ್ಯಕ್ತಿಯನ್ನು ಪಕ್ಷದಲ್ಲಿ ನಿರ್ಲಕ್ಷ್ಯದಿಂದ ನೋಡಲಾಗಿದೆ. ರಾಜ್ಯದ ರಾಜಕೀಯ ಚಟುವಟಿಕೆಗಳಲ್ಲಿ ಅವರನ್ನು ಲೆಕ್ಕಕ್ಕೆ ತೆಗೆದುಕೊಳ್ಳದೆ ನಿರ್ಧಾರಗಳನ್ನು ಕೈಗೊಳ್ಳಲಾಗಿದ್ದು. ಇದರಿಂದ ಬೇಸರಗೊಂಡು ಎಸ್.ಎಂ.ಕೃಷ್ಣ ಅವರು ಪಕ್ಷ ತೊರೆದಿದ್ದಾರೆ.

ಸಿದ್ದರಾಮಯ್ಯ ಅವರು ಪಕ್ಷದ ಹಿರಿಯ ನಾಯಕರ ಅಭಿಪ್ರಾಯಗಳನ್ನು ತೆಗೆದುಕೊಳ್ಳುತ್ತಿರಲಿಲ್ಲ. ಇದೀಗ ತಮ್ಮ ಬೆಂಬಲಿಗರನ್ನೂ ಲೆಕ್ಕಕ್ಕೆ ತೆಗೆದುಕೊಳ್ಳುತ್ತಿಲ್ಲ. ಶೀಘ್ರದಲ್ಲೇ ಈ ಭಿನ್ನತೆಗಳು ದೊಡ್ಡದಾಗಲಿದೆ. ಇದಕ್ಕೆ ಕಾಂಗ್ರೆಸ ದೊಡ್ಡ ಬೆಲೆಯನ್ನೇ ತೆರಬೇಕಾಗುತ್ತದೆ ಎಂದು ತಿಳಿಸಿದ್ದಾರೆ.

ನಿನ್ನೆಯಷ್ಟೇ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಯವರಿಗೆ ಪತ್ರ ಬರೆದಿದ್ದ ಎಸ್.ಎಂ. ಕೃಷ್ಣ ಅವರು, ನಾನು ರಾಜಕಾರಣದಿಂದ ದೂರ ಸರಿಯುವ ಬಗ್ಗೆ ಇಂಗಿತ ವ್ಯಕ್ತಪಡಿಸಿದ್ದರು.  ಅಲ್ಲದೆ ಇನ್ನು ಮುಂದೆ ಕಾಂಗ್ರೆಸ್ ಸದಸ್ಯತ್ವ ನವೀಕರಣ ಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದ್ದರು.

84 ವರ್ಷದ ಹಿರಿಯ ಮುತ್ಸದ್ದಿ ಎಸ್.ಎಂ. ಕೃಷ್ಣ ಅವರು ರಾಜ್ಯ ರಾಜಕಾರಣದ ಹೊರತಾಗಿಯೂ ರಾಷ್ಟ್ರ ಮಟ್ಟದಲ್ಲೂ ಮಿಂಚಿದವರು. 2004ರಿಂದ 2008ರಲ್ಲಿ ಮಹಾರಾಷ್ಟ್ರದ ರಾಜ್ಯಪಾಲರಾಗಿ, ಕೇಂದ್ರದಲ್ಲಿ ಯುಪಿಎ ಸರ್ಕಾರವಿದ್ದಾಗ 2009ರಿಂದ 2012ರವರೆಗೆ ವಿದೇಶಾಂಗ ಸಚಿವರಾಗಿ ಹಾಗೂ 1999ರಿಂದ 2004ರವರೆಗೆ ಕರ್ನಾಟಕದ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com