

ನವದೆಹಲಿ: ಮಹಾತ್ಮ ಗಾಂಧೀಜಿಯವರ 69ನೇ ಪುಣ್ಯತಿಥಿ ದಿನ ಹಿನ್ನಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಸೋಮವಾರ ಶ್ರದ್ಧಾಂಜಲಿ ಅರ್ಪಿಸಿದ್ದಾರೆ.
ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಅವರು, ಪೂಜ್ಯ ಬಾಪು ಅವರಿಗೆ ನನ್ನ ಶ್ರದ್ಧಾಪೂರ್ವಕ ನಮನಗಳು ಎಂದು ಹೇಳುವ ಮೂಲಕ ಶ್ರದ್ಧಾಂಜಲಿ ಅರ್ಜಿಸಿದ್ದಾರೆ.
ಪುಣ್ಯತಿಥಿ ಹಿನ್ನಲೆಯಲ್ಲಿ ರಾಜ್'ಘಾಟ್ ನಲ್ಲಿರುವ ಮಹಾತ್ಮ ಗಾಂಧೀಜಿಯವರ ಸ್ಮಾರಕ್ಕೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿ, ಉಪರಾಷ್ಟ್ರಪತಿ ಹಮಿದ್ ಅನ್ಸಾರಿ ಮತ್ತು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಭೇಟಿ ನೀಡಿ ಪುಷ್ಪನಮನ ಸಲ್ಲಿಸಲಿದ್ದಾರೆ.
ರಾಷ್ಟ್ರಪಿತ ಮಹಾತ್ಮಗಾಂಧೀಜಿಯವರನ್ನು 1948ರ ಜನವರಿ 30 ರಂದು ಗುಂಡಿಟ್ಟು ಹತ್ಯೆ ಮಾಡಲಾಗಿತ್ತು.