ದೆಹಲಿ: ಪತ್ನಿ ಮೇಲೆ ಕಲ್ಲು ಎತ್ತು ಹಾಕಿ ಬರ್ಬರ ಹತ್ಯೆ

ವ್ಯಕ್ತಿಯೊಬ್ಬ ತನ್ನ ಪತ್ನಿ ಮೇಲೆ ಕಲ್ಲು ಎತ್ತು ಹಾಕಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆಯೊಂದಹು ರಾಜಧಾನಿ ದೆಹಲಿಯ ಮಂಗೋಲ್ಪುರಿ ಪ್ರದೇಶದಲ್ಲ ಸಾರ್ವಜನಿಕ ಉದ್ಯಾನವನದಲ್ಲಿ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ನವದೆಹಲಿ: ವ್ಯಕ್ತಿಯೊಬ್ಬ ತನ್ನ ಪತ್ನಿ ಮೇಲೆ ಕಲ್ಲು ಎತ್ತು ಹಾಕಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆಯೊಂದಹು ರಾಜಧಾನಿ ದೆಹಲಿಯ ಮಂಗೋಲ್ಪುರಿ ಪ್ರದೇಶದಲ್ಲ ಸಾರ್ವಜನಿಕ ಉದ್ಯಾನವನದಲ್ಲಿ ಸೋಮವಾರ ರಾತ್ರಿ ನಡೆದಿದೆ.

ಆರತಿ (30) ಹತ್ಯೆಯಾದ ಮಹಿಳೆಯಾಗಿದ್ದಾರೆ. ಕೆಲ ತಿಂಗಳ ಹಿಂದಷ್ಟೇ ಆರತಿ ವಿವಾಹ ಜೀವನಕ್ಕೆ ಕಾಲಿಟ್ಟಿದ್ದರು. ಕಳೆದ ರಾತ್ರಿ ಪೊಲೀಸರಿಗೆ ಕರೆ ಮಾಡಿದ್ದ ವ್ಯಕ್ತಿಯೊಬ್ಬ ಮಹಿಳೆಯೊಬ್ಬರನ್ನು ನಾನು ಹತ್ಯೆ ಮಾಡಿದ್ದು, ಪೊಲೀಸ್ ಠಾಣೆ ಬಂದು ಶರಣಾಗುತ್ತೇನೆಂದು ಹೇಳಿದ್ದಾನೆ. ಕರೆ ಮಾಡಿದ್ದ ವ್ಯಕ್ತಿ ಆರತಿಯ ಪತಿಯೇ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ.

ಸುದ್ದಿ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಹೋದಾಗ ಮಹಿಳೆಯ ರಕ್ತದ ಮಡುವಲ್ಲಿ ಮೃತದೇಹ ದೊರಕಿದೆ. ಮಹಿಳೆಯ ತಲೆ ಮೇಲೆ ಕಲ್ಲು ಎತ್ತುಹಾಕಿ ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದು, ತಲೆಮರೆಸಿಕೊಂಡಿರುವ ಆರತಿ ಪತಿಗಾಗಿ ಹುಡುಕಾಟ ಆರಂಭಿಸಿದ್ದಾರೆ. ಕೊಲೆಗೆ ಪ್ರಮುಖ ಕಾರಣಗಳು ತಿಳಿದುಬಂದಿಲ್ಲ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com