ನವದೆಹಲಿ: ಮುಂಬರುವ ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧೀ ಯಾವುದೇ ಕ್ಷೇತ್ರದಲ್ಲೂ ಪ್ರಚಾರ ನಡೆಸುವುದಿಲ್ಲ ಎಂದು ಮೂಲಗಳು ಹೇಳಿವೆ.
ಉತ್ತರಪ್ರದೇಶ ಚುನಾವಣೆ ಹಿನ್ನೆಲೆ ಕಾಂಗ್ರೆಸ್ ಮತ್ತು ಸಮಾಜವಾದಿ ಪಕ್ಷ ಚುನಾವಣಾ ಪೂರ್ವ ಮೈತ್ರಿ ಮಾಡಿಕೊಂಡಿದ್ದು ಎಸ್ಪಿ ವರಿಷ್ಠಾ ಮುಲಾಯಂ ಸಿಂಗ್ ಯಾದವ್ ಮತ್ತು ಸೋನಿಯಾ ಗಾಂಧಿ ಅವರು ಪ್ರಚಾರ ನಡೆಸತ್ತಾರೆ ಎಂದು ಹೇಳಲಾಗಿತ್ತು. ಆದರೆ ಇತ್ತೀಚೆಗಷ್ಟೇ ಜಂಟಿ ಪತ್ರಿಕಾಗೋಷ್ಟಿ ನಡೆಸಿದ ಮಾತನಾಡಿದ್ದ ಉತ್ತರ ಪ್ರದೇಶ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಮತ್ತು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರಿಬ್ಬರ ಆಶೀರ್ವಾದ ತಮ್ಮ ಮೇಲಿರುವುದಾಗಿ ಹೇಳಿದ್ದರು.
ಕಾಂಗ್ರೆಸ್ ಜತೆ ಮೈತ್ರಿಗೆ ನಾನು ಅನುಮತಿ ನೀಡಿರಲಿಲ್ಲ. ಹೀಗಾಗಿ ನಾನು ಪುತ್ರನ ಪರವಾಗಿ ಪ್ರಚಾರ ನಡೆಸುವುದಿಲ್ಲ ಎಂದು ಮುಲಾಯಂ ಸಿಂಗ್ ಹೇಳಿದ್ದರು. ಯಾವ ಪಕ್ಷದ ಜತೆಗೂ ಮೈತ್ರಿ ಮಾಡಿಕೊಳ್ಳದೇ ಏಕಾಂಗಿಯಾಗಿ ಸ್ಪರ್ಧಿಸಿ ಗೆಲ್ಲುವ ಸಾಮರ್ಥ್ಯ ಪಕ್ಷಕ್ಕಿತ್ತು. ಮೈತ್ರಿಯಿಂದ ನಮ್ಮ ಪಕ್ಷದ ನಾಯಕರಿಗೆ ಟಿಕೆಟ್ ಸಿಗದಿದ್ದರೆ ಅವರು ಐದು ವರ್ಷಗಳ ಕಾಲ ಏನು ಮಾಡುತ್ತಾರೆ ಎಂದು ಪ್ರಶ್ನಿಸಿದ್ದರು.
ಫೆಬ್ರವರಿಯಲ್ಲಿ ಉತ್ತರಪ್ರದೇಶ, ಉತ್ತರಾಖಂಡ, ಗೋವಾ, ಪಂಜಾಬ್ ಮತ್ತು ಮಣಿಪುರದಲ್ಲಿ ವಿಧಾನಸಭೆಗೆ ಚುನಾವಣೆ ನಡೆಯಲಿದೆ.