ಉತ್ತರ ಪ್ರದೇಶ ಮತ್ತೊಂದು ಕಾಶ್ಮೀರವಾಗಬಹುದು: ಯೋಗಿ ಆದಿತ್ಯನಾಥ್

ಹಿಂದೂಗಳ ವಲಸೆಯನ್ನು ತಡೆಯದೇ ಇದ್ದರೆ ಉತ್ತರ ಪ್ರದೇಶವೂ ಕಾಶ್ಮೀರದ ಪರಿಸ್ಥಿತಿಯನ್ನು ಎದುರಿಸಬೇಕಾಗುತ್ತದೆ ಎಂದು ಬಿಜೆಪಿ ಸಂಸದ ಯೋಗಿ ಆದಿತ್ಯನಾಥ್ ಎಚ್ಚರಿಸಿದ್ದಾರೆ.
ಯೋಗಿ ಆದಿತ್ಯನಾಥ್
ಯೋಗಿ ಆದಿತ್ಯನಾಥ್
Updated on: 
ನವದೆಹಲಿ: ಹಿಂದೂಗಳ ವಲಸೆಯನ್ನು ತಡೆಯದೇ ಇದ್ದರೆ ಉತ್ತರ ಪ್ರದೇಶವೂ ಕಾಶ್ಮೀರದ ಪರಿಸ್ಥಿತಿಯನ್ನು ಎದುರಿಸಬೇಕಾಗುತ್ತದೆ ಎಂದು ಬಿಜೆಪಿ ಸಂಸದ ಯೋಗಿ ಆದಿತ್ಯನಾಥ್ ಎಚ್ಚರಿಸಿದ್ದಾರೆ. 
ಬಿಎಸ್ ಪಿ-ಎಸ್ ಪಿ ಹಿಂದೂಗಳ ಹಿತಾಸಕ್ತಿಗಳನ್ನು ರಕ್ಷಿಸುವಲ್ಲಿ ವಿಫಲವಾಗಿವೆ. ಹಿಂದೂಗಳ ರಕ್ಷಣೆಗಾಗಿ ಸೂಕ್ತ ಕ್ರಮ ಕೈಗೊಳ್ಳದೇ ಇದ್ದರೆ ಕಾಶ್ಮೀರದಲ್ಲಿ ಎದುರಾದ ಸ್ಥಿತಿಯೇ ಉತ್ತರ ಪ್ರದೇಶಕ್ಕೂ ಬರಲಿದೆ ಎಂದು ಆದಿತ್ಯನಾಥ್ ಹೇಳಿದ್ದಾರೆ. 
ಪಶ್ಚಿಮ ಉತ್ತರ ಪ್ರದೇಶದಲ್ಲಿ ಹಿಂದೂಗಳ ಮೇಲೆ ಕಾಶ್ಮೀರಿ ಪಂಡಿತರ ಮೇಲೆ ನಡೆದ ರೀತಿಯಲ್ಲೇ ಭಯೋತ್ಪಾದನೆ ನಡೆಯುತ್ತಿದೆ ಎಂದು ಯೋಗಿ ಆದಿತ್ಯನಾಥ್ ಆತಂಕ ವ್ಯಕ್ತಪಡಿಸಿದ್ದು, ಮುಜಾಫರ್ ನಗರ್, ಮೀರತ್, ಗಾಜಿಯಾಬಾದ್ ಗಳಲ್ಲಿ ಹಿಂದೂಗಳ ಪರಿಸ್ಥಿತಿ ಚಿಂತಾಜನಕವಾಗಿದೆ ಎಂದು ಯೋಗಿ ಆದಿತ್ಯನಾಥ್ ಹೇಳಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com