ಕಾನ್ಪುರದಲ್ಲಿ ನಿರ್ಮಾಣ ಹಂತದ ಕಟ್ಟ ಕುಸಿದು 8 ಮಂದಿ ಸಾವು

ಉತ್ತರ ಪ್ರದೇಶದ ಕಾನ್ಪುರದಲ್ಲಿ ನಿರ್ಮಾಣದ ಹಂತದ ಏಳು ಅಂತಸ್ಥಿನ ಕಟ್ಟಡವೊಂದು ಬುಧವಾರ ಕುಸಿದು ಬಿದ್ದಿದ್ದು, ಕಟ್ಟಡ ಅವಶೇಷಗಳಡಿ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
ಲಖನೌ: ಉತ್ತರ ಪ್ರದೇಶದ ಕಾನ್ಪುರದಲ್ಲಿ ನಿರ್ಮಾಣದ ಹಂತದ ಏಳು ಮಹಡಿಯ ಕಟ್ಟಡವೊಂದು ಬುಧವಾರ ಕುಸಿದು ಬಿದ್ದು ಕನಿಷ್ಠ ಎಂಟು ಮಂದಿ ಮೃತಪಟ್ಟಿದ್ದಾರೆ ಮತ್ತು 100ಕ್ಕೂ ಹೆಚ್ಚು ಮಂದಿ ಕಟ್ಟಡದ ಅವಶೇಷಗಳಡಿ ಸಿಲುಕಿರುವ ಸಾಧ್ಯತೆ ಇದೆ ಎನ್ನಲಾಗಿದೆ.
ಸೇನಾ ಸಿಬ್ಬಂದಿ, ಪೊಲೀಸರು, ಅಗ್ನಿ ಶಾಮಕ ಸಿಬ್ಬಂದಿ ಹಾಗೂ ತುರ್ತು ಸೇವಾ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿದ್ದು, ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ.
ಕಾರ್ಮಿಕರು ಆರನೇ ಮಹಡಿಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಕಟ್ಟಡ ಕುಸಿದು ಬಿದ್ದಿದ್ದು, ಕನಿಷ್ಠ ಎಂಟು ಮಂಜಿ ಮೃತಪಟ್ಟಿದ್ದಾರೆ ಮತ್ತು ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಗಾಯಾಳುಗಳಿಗೆ ತಕ್ಷಣ ತುರ್ತು ಚಿಕಿತ್ಸೆ ನೀಡುವಂತೆ ನಗರದ ಆಸ್ಪತ್ರೆಗಳಿಗೆ ಸೂಚಿಸಲಾಗಿದೆ ಮತ್ತು ಸ್ಥಳದಲ್ಲಿ ಹಲವು ಆಂಬುಲೆನ್ಸ್ ಗಳನ್ನು ನಿಯೋಜಿಸಲಾಗಿದೆ ಎಂದು ಕಾನ್ಪುರ ಜಿಲ್ಲಾಧಿಕಾರಿ ಹೇಳಿದ್ದಾರೆ.
ನಿರ್ಮಾಣ ಹಂತದ ಕಟ್ಟಡ ಸಮಾಜವಾದಿ ಪಕ್ಷದ ನಾಯಕ ಮೆಹ್ತಾಬ್ ಅಲಂ ಅವರಿಗೆ ಸೇರಿದ್ದು, ಕಳಪೆ ಕಾಮಗಾರಿಯೇ ಕಟ್ಟಡ ಕುಸಿತಕ್ಕೆ ಕಾರಣ ಎಂದು ಕಾನ್ಪುರ ಎಸ್ಎಸ್ ಪಿ ಆಕಾಶ್ ಕುಲಹರಿ ಅವರು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com