
ನವದೆಹಲಿ: ದೇಶದ ಇತಿಹಾಸದಲ್ಲಿಯೇ ಇದೇ ಮೊದಲ ಬಾರಿಕೆ ಏಕಕಾಲಕ್ಕೆ ರೈಲ್ವೆ ಬಜೆಟ್ ಒಳಗೊಂಡ ಸಾಮಾನ್ಯ ಬಜೆಟ್ ಬುಧವಾರ ಬೆಳಿಗ್ಗೆ ಆರಂಭವಾಗಿದ್ದು, ಹಣಕಾಸು ಸಚಿವ ಅರುಣ್ ಜೇಟ್ಲಿಯವರು ಲೋಕಸಭೆಯಲ್ಲಿ 2017-18ನೇ ಸಾಲಿನ ಬಜೆಟ್ ಮಂಡನೆ ಆರಂಭಿಸಿದ್ದಾರೆ.
ವಾಡಿಕೆಯಂತೇ ಹಣಕಾಸು ಸಚಿವರು ಇಂದು ಬೆಳಿಗ್ಗೆ ತಮ್ಮ ಅಧಿಕಾರಿಗಳೊಂದಿಗೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿಯವರನ್ನು ಭೇಟಿ ಮಾಡಿದರು. ಬಳಿಕ ರಾಷ್ಟ್ರಪತಿ ಭವನದಿಂದ ಸಂಸತ್ ಗೆ ಆಗಮಿಸಿದರು.
ಮಂಗಳವಾರ ತಡರಾತ್ರಿ ಕೇಂದ್ರದ ಮಾಜಿ ಸಚಿವ ಇ. ಅಹಮದ್ ಅವರು ವಿಧಿವಶರಾಗಿದ್ದರು. ಈ ಹಿನ್ನಲೆಯಲ್ಲಿ ಬಜೆಟ್ ಮುಂದೂಡುವ ಸಾಧ್ಯತೆಗಳಿವೆ ಎಂಬ ಮಾತುಗಳು ಕೇಳಿಬಂದಿದ್ದವು. ಈ ಹಿನ್ನಲೆಯಲ್ಲಿ ಇಂದು ಬೆಳಿಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಹಿರಿಯ ಸಚಿವರೊಂದಿಗೆ ಸಭೆಯನ್ನು ನಡೆಸಿ ಬಜೆಟ್ ಮಂಡಿಸುವಂತೆ ತೀರ್ಮಾನ ಕೈಗೊಳ್ಳಲಾಯಿತು.
ಈ ನಿರ್ಧಾರಕ್ಕೆ ವಿರೋಧ ಪಕ್ಷಗಳು ವಿರೋಧ ವ್ಯಕ್ತಪಡಿಸಿದ್ದವು. ಮಾಜಿ ಸಚಿವರ ನಿಧನರಾದ ಹಿನ್ನಲೆಯಲ್ಲಿ ಬಜೆಟ್ ನ್ನು ಮುಂದುಡುವಂತೆ ಆಗ್ರಹಿಸಿದ್ದವು. ನಂತರ ಬಜೆಟ್ ಕುರಿತಂತೆ ಸ್ಪಷ್ಟನೆ ನೀಡಿದ ಲೋಕಸಭಾ ಸ್ಪೀಕರ್ ಸುಮಿತ್ರಾ ಮಹಾಜನ್ ಅವರು, ಶಿಷ್ಟಾಚಾರದಂತೆ ಬಜೆಟ್ ಮಂಡನೆಗೆ ರಾಷ್ಟಪತಿಗಳ ಅನುಮೋದನೆ ಪಡೆದು ಬೆಳಗ್ಗೆ 11 ಗಂಟೆಗೆ ಕಲಾಪ ಆರಂಭಿಸಲಾಗುತ್ತದೆ. ಬಳಿಕ ಮೃತಪಟ್ಟ ಸಂಸದ ಇ ಅಹ್ಮದ್ ಅವರಿಗೆ ಕಲಾಪದಲ್ಲಿ ಶ್ರದ್ಧಾಂಜಲಿ ಸಲ್ಲಿಸಿ ಬಜೆಟ್ ಮಂಡನೆಗೆ ಅನುವು ಮಾಡಿಕೊಡಲಾಗುತ್ತದೆ. ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ಅವರು ಬಜೆಟ್ ಮಂಡಿಸಲಿದ್ದಾರೆ ಎಂದು ಹೇಳಿದ್ದರು,
ಇದರಂತೆ ಬೆಳಿಗ್ಗೆ ಬಜೆಟ್ ಕಲಾಪ ಆರಂಭವಾಗುತ್ತಿದ್ದಂತೆ ಒಂದು ನಿಮಿಷದ ಮೌನಾಚರಣೆ ಮೂಲಕ ಸಂಸತ್ ನಲ್ಲಿ ಅಹ್ಮದ್ ಅವರಿಗೆ ಶ್ರದ್ಧಾಂಜಲಿ ಸಲ್ಲಿಕೆ ಮಾಡಲಾಯಿತು. ನಂತರ ಸುಮಿತ್ರಾ ಮಹಾಜನ್ ಮಾತನಾಡಲು ಆರಂಭ ಮಾಡುತ್ತಿದ್ದಂತೆ ಕಲಾಪವನ್ನು ಮುಂದೂಡುವಂತೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆಯವರು ಆಗ್ರಹಿಸಿದರು. ಗದ್ದಲ ಉಂಟಾಗುವ ಹಿನ್ನಲೆಯಲ್ಲಿ ಬಜೆಟ್ ಕಲಾಪವನ್ನು ಸ್ಪೀಕರ್ ಸುಮಿತ್ರಾ ಮಹಾಜನ್ ಅವರು ನಾಳೆಗೆ ಮುಂದೂಡಿದರು. ಈ ಎಲ್ಲಾ ಬೆಳವಣಿಗೆ ಹಾಗೂ ವಿಪಕ್ಷಗಳ ಕಲಾಪ ಮುಂದೂಡುವಂತೆ ಒತ್ತಾಯದ ನಡುವೆಯೂ ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ಅವರು ಬಜೆಟ್ ಮಂಡನೆ ಆರಂಭ ಮಾಡಿದರು.
2017ನೇ ಸಾಲಿನ ಕೇಂದ್ರ ಬಜೆಟ್ ಮಂಡನೆಯ ನೇರ ಪ್ರಸಾರ
Advertisement