ರಾಯಬರೇಲಿಯಲ್ಲಿ ಐವರ ಹತ್ಯೆ: ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರು.ಪರಿಹಾರ ಘೋಷಿಸಿದ ಯುಪಿ ಸಿಎಂ

ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ನಡೆದ ಐವರ ಕೊಲೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಉತ್ತರ ಪ್ರದೇಶ....
ಯೋಗಿ ಆದಿತ್ಯನಾಥ್
ಯೋಗಿ ಆದಿತ್ಯನಾಥ್
ಲಖನೌ: ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ನಡೆದ ಐವರ ಕೊಲೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು, ಮೃತರ ಕುಟುಂಬಕ್ಕೆ ತಲಾ ಐದು ಲಕ್ಷ ರುಪಾಯಿ ಪರಿಹಾರ ಘೋಷಿಸಿದ್ದಾರೆ. ಅಲ್ಲದೆ ಪ್ರಕರಣದ ಕುರಿತು ತನಿಖೆ ನಡೆಸುವಂತೆ ವಲಯ ಪೊಲೀಸ್ ಮಹಾ ನಿರ್ದೇಶಕರಿಗೆ ಸೂಚಿಸಿದ್ದಾರೆ.
ಕಳೆದ ಜೂನ್ 26ರಂದು ರಾಯಬರೇಲಿ ಜಿಲ್ಲೆಯ ಉಂಚಾರ ಪ್ರದೇಶದ ಅಪ್ತಾ ಗ್ರಾಮದಲ್ಲಿ ಭೂಮಿ ಒತ್ತುವರಿ ಮಾಡಿದ್ದಾರೆ ಎಂದು ಆರೋಪಿಸಿ ದುಷ್ಕರ್ಮಿಗಳ ಗುಂಪೊಂದು ಗ್ರಾಮದ ಮುಖ್ಯಸ್ಥ ಸೇರಿದಂತೆ ಐವರನ್ನು ಹತ್ಯೆ ಮಾಡಿತ್ತು.
ಸಿಎಂ ಯೋಗಿ ಆದಿತ್ಯನಾಥ್ ಅವರು ಕೊಲೆಯಾದವರ ಕುಟುಂಬಕ್ಕೆ ತಲಾ ಐದು ಲಕ್ಷ ರುಪಾಯಿ ಪರಿಹಾರ ಘೋಷಿಸಿದ್ದಾರೆ. ಅಲ್ಲದೆ ಪ್ರಕರಣದ ತನಿಖೆ ನಡೆಸಿ 10 ದಿನದಲ್ಲಿ ವರದಿ ನೀಡುವಂತೆ ಲಖನೌ ವಲಯ ಪೊಲೀಸ್ ಮಹಾ ನಿರ್ದೇಶಕರಿಗೆ ಸೂಚಿಸಲಾಗಿದೆ ಎಂದು ರಾಜ್ಯ ಬಿಜೆಪಿ ವಕ್ತಾರ ಶಲಭ್ ಮನಿ ತ್ರಿಪಾಠಿ ಅವರು ಹೇಳಿದ್ದಾರೆ.
ನಮ್ಮ ಸರ್ಕಾರ ಹಿಂಸಾಚರವನ್ನು ಸಹಿಸಿಕೊಳ್ಳುವುದಿಲ್ಲ. ಮೃತರ ಕುಟಂಬಕ್ಕೆ ಸರ್ಕಾರ ಈಗ ಪರಿಹಾರ ಘೋಷಿಸಿದ್ದು, ಶೀಘ್ರದಲ್ಲೇ ಅವರ ಸಾವಿಗೆ ನ್ಯಾಯ ಸಿಗಲಿದೆ ಎಂದು ಅವರು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com