ಮಾನವೀಯತೆ ಮೆರೆದ ಉತ್ತರಾಖಂಡ್ ಸಿಎಂ: ಪ್ರಜ್ಞಾಹೀನ ಸ್ಥಿತಿಯಲ್ಲಿ ರಸ್ತೆಯಲ್ಲಿ ಬಿದ್ದಿದ್ದ ವ್ಯಕ್ತಿ ರಕ್ಷಣೆ

ನಡುರಸ್ತೆಯಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದ್ದ ವ್ಯಕ್ತಿಯೊಬ್ಬನನ್ನು ರಕ್ಷಣೆ ಮಾಡುವ ಮೂಲಕ ಉತ್ತರಖಾಂಡ್ ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್ ರಾವತ್ ಅವರು ಮಾನವೀಯತೆ ಮರೆದಿದ್ದಾರೆ...
ಉತ್ತರಖಾಂಡ್ ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್ ರಾವತ್
ಉತ್ತರಖಾಂಡ್ ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್ ರಾವತ್
ಡೆಹ್ರಾಡೂನ್: ನಡುರಸ್ತೆಯಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದ್ದ ವ್ಯಕ್ತಿಯೊಬ್ಬನನ್ನು ರಕ್ಷಣೆ ಮಾಡುವ ಮೂಲಕ ಉತ್ತರಖಾಂಡ್ ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್ ರಾವತ್ ಅವರು ಮಾನವೀಯತೆ ಮರೆದಿದ್ದಾರೆ. 
ಸರ್ಕಾರಿ ಅಧಿಕೃತ ಕಾರ್ಯಕ್ರಮವೊಂದಕ್ಕೆ ಭೇಟಿ ನೀಡಿದ್ದ ಸಿಎಂ ತ್ರಿವೇಂದ್ರ ಅವರು ಬೆಂಗಾವಲು ಪಡೆಯೊಂದಿಗೆ ಕಾರಿನಲ್ಲಿ ತೆರಳುತ್ತಿದ್ದರು. ಲಚ್ಚಿವಾಲಾ ಎಂಬ ಪ್ರದೇಶಕ್ಕೆ ಬರುತ್ತಿದ್ದಂತೆಯೇ ರಸ್ತೆಯೊಂದರ ಬಳಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿರುವ ವ್ಯಕ್ತಿಯನ್ನು ನೋಡಿದ್ದಾರೆ. ಕೂಡಲೇ ಕಾರು ನಿಲ್ಲಿಸುವಂತೆ ಚಾಲಕನಿಗೆ ಸೂಚಿಸಿದ ಸಿಎಂ ವ್ಯಕ್ತಿಯ ಬಳಿ ಹೋಗಿದ್ದಾರೆ. 
ನಂತರ ವ್ಯಕ್ತಿಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿ ಚಿಕಿತ್ಸೆ ಕೊಡಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಕಾರಿನಲ್ಲಿ ವ್ಯಕ್ತಿಯನ್ನು ಕರೆದುಕೊಂಡು ಹೋಗುವವರೆಗೂ ಸ್ಥಳದಲ್ಲಿಯೇ ನಿಂತಿದ್ದ ತ್ರಿವೇದಿಯವರು ನಂತರ ತೆರಳಿದ್ದಾರೆ. 
ರಾವತ್ ಅವರ ಮಾನವೀಯತೆ ಈ ನಡೆ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ವಾಟ್ಸ್ ಅಪ್ ಹಾಗೂ ಸಾಮಾಜಿಕ ಜಾಲಗಳಲ್ಲಿ ಫೋಟೋಗಳನ್ನು ಹಾಕುತ್ತಿರುವ ಸಾರ್ವಜನಿಕರು ಉತ್ತರಾಖಂಡ್ ಸಿಎಂರನ್ನು ಕೊಂಡಾಡುತ್ತಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com