ಒಡಿಶಾ: ಮದುವೆ ಊಟ ಸೇವಿಸಿ 350 ಮಂದಿ ಅಸ್ವಸ್ಥ

ಮದುವೆ ಊಟ ಸೇವಿಸಿ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ 350ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡಿರುವ ಘಟನೆ ಭಾನುವಾರ....
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
ನಬರಂಗಪುರ್: ಮದುವೆ ಊಟ ಸೇವಿಸಿ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ 350ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡಿರುವ ಘಟನೆ ಭಾನುವಾರ ಒಡಿಶಾದ ರಾಯಗರ್ ಬ್ಲಾಕ್ ನ ಜೊಡಜೋಂಗ್ ಡಿಎನ್ ಕೆ ಗ್ರಾಮದಲ್ಲಿ ನಡೆದಿದೆ.
ಅಸ್ವಸ್ಥಗೊಂಡವರನ್ನು ಕೂಡಲೇ ಹತಭರಂಡಿಯ ಸಮುದಾಯ ಆರೋಗ್ಯ ಕೇಂದ್ರ, ಜೋಡೆಂಗ ಸಾರ್ವಜನಿಕ ಆರೋಗ್ಯ ಕೇಂದ್ರ ಹಾಗೂ ತುರುಧಿ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಅಲ್ಲದೆ ವೈಂದಕೀಯ ತಂಡವೊಂದು ಗ್ರಾಮಕ್ಕೆ ಆಗಮಿಸಿದ್ದು, ಅಸ್ವಸ್ಥರಿಗೆ ಚಿಕಿತ್ಸೆ ನೀಡುತ್ತಿದ್ದಾರೆ.
ಸ್ಥಳೀಯ ನಿವಾಸಿ ಬಿರೇನ್ ಧರಣಿ ಅವರ ಪುತ್ರನ ಮದುವೆಯಲ್ಲಿ ಫಿಸ್ ಕರಿ ಮತ್ತು ರೈಸ್ ಸೇವಿಸಿದ ನಂತರ ಹಲವರಿಗೆ ಹೊಟ್ಟೆ ನೋವು ಕಾಣಿಸಿಕೊಂಡಿದೆ ಮತ್ತು ವಾಂತಿ ಸಹ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ಅಸ್ವಸ್ಥರಿಗೆ ವಿಶೇಷ ವೈದ್ಯಕೀಯ ತಂಡ ಚಿಕಿತ್ಸೆ ನೀಡುತ್ತಿದ್ದು, ಎಲ್ಲರೂ ಪ್ರಾಣಪಾಯದಿಂದ ಪಾರಾಗಿದ್ದಾರೆ. ಅಲ್ಲದೆ ಅವರು ಸೇವಿಸಿದ ಆಹಾರದ ಮಾದರಿಯನ್ನು ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಿಲಾಗಿದೆ ಎಂದು ಜಿಲ್ಲಾಧಿಕಾರಿ ಪಾಂಡಾ ಅವರು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com