ನರೇಂದ್ರ ಮೋದಿ
ದೇಶ
ಪ್ರಧಾನಿ ಮೋದಿ ಟೀ ಮಾರಿದ್ದ ಜಾಗ ಈಗ ಪ್ರವಾಸಿ ತಾಣವಾಗಿ ಅಭಿವೃದ್ಧಿ!
ಪ್ರಧಾನಿ ನರೇಂದ್ರ ಮೋದಿ ಅವರು ಬಾಲ್ಯದಲ್ಲಿ ಚಹಾ ಮಾರಿದ್ದ ಗುಜರಾತ್ ನ ವಾದ್ನಗರ್ ರೈಲ್ವೆ ನಿಲ್ದಾಣವನ್ನು ಪ್ರವಾಸಿ ತಾಣವಾಗಿ ಅಭಿವೃದ್ಧಿ ಪಡಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ...
ಪ್ರಧಾನಿ ನರೇಂದ್ರ ಮೋದಿ ಅವರು ಬಾಲ್ಯದಲ್ಲಿ ಚಹಾ ಮಾರಿದ್ದ ಗುಜರಾತ್ ನ ವಾದ್ನಗರ್ ರೈಲ್ವೆ ನಿಲ್ದಾಣವನ್ನು ಪ್ರವಾಸಿ ತಾಣವಾಗಿ ಅಭಿವೃದ್ಧಿ ಪಡಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ.
ವಿಶ್ವ ಪ್ರವಾಸೋದ್ಯಮ ನಕ್ಷೆಯಲ್ಲಿ ಮೋದಿ ಅವರ ಹುಟ್ಟುರಾದ ಗುಜರಾತ್ ನ ವಾದ್ನಗರ್ ನ ಮೆಹಸಾನ ದೊಡ್ಡ ಪ್ರವಾಸಿ ತಾಣವನ್ನಾಗಿ ಮಾಡುವ ಯೋಜನೆಗೆ ಕೇಂದ್ರ ಮುಂದಾಗಿದ್ದು ಈ ಸಂಬಂಧ ಭಾನುವಾರ ಸಂಸ್ಕೃತಿ ಮತ್ತು ಪ್ರವಾಸೋದ್ಯಮ ಹಾಗೂ ಭಾರತದ ಪುರಾತತ್ವ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಸಮೀಕ್ಷೆ ನಡೆಸಿದ್ದಾರೆ.
ಕೇಂದ್ರ ಸಂಸ್ಕೃತಿ ಸಚಿವ ಮಹೇಶ್ ಶರ್ಮಾ ನೇತೃತ್ವದಲ್ಲಿ ಅಧಿಕಾರಿಗಳು ಭೇಟಿ ನೀಡಿ ಸಮೀಕ್ಷೆ ನಡೆಸಿದರು. ಬಳಿಕ ಮಾತನಾಡಿದ ಮಹೇಶ್ ಶರ್ಮಾ ಅವರು ಪ್ರಧಾನಿ ಮೋದಿ ಅವರು ಬಾಲ್ಯದಲ್ಲಿ ಚಹಾ ಮಾರಿದ್ದ ಅಂಗಡಿಗೆ ಆಧುನಿಕ ಸ್ಪರ್ಶ ನೀಡಲಾಗುವುದು. ಜತೆಗೆ ಶರ್ಮಿತಾ ಸರೋವರದಲ್ಲಿ ಪ್ರಮುಖ ಐತಿಹಾಸಿಕ ಕೇಂದ್ರವನ್ನು ನಿರ್ಮಿಸಲಾಗುವುದು ಎಂದರು.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ