ಕೇಂದ್ರ ಸಚಿವ ಕಿರಣ್ ರಿಜಿಜು ಪ್ರಯಾಣಿಸುತ್ತಿದ್ದ ಹೆಲಿಕಾಫ್ಟರ್ ತುರ್ತು ಭೂಸ್ಪರ್ಶ

ಪ್ರತಿಕೂಲ ವಾತಾವರಣ ಹಿನ್ನೆಲೆ ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಕಿರಣ್ ರಿಜಿಜು ಪ್ರಯಾಣಿಸುತ್ತಿದ್ದ ಹೆಲಿಕಾಫ್ಟರ್ ಇಟಾನಗರದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ...
ಹೆಲಿಕಾಫ್ಟರ್
ಹೆಲಿಕಾಫ್ಟರ್
Updated on
ಇಟಾನಗರ್(ಅರುಣಾಚಲಪ್ರದೇಶ): ಪ್ರತಿಕೂಲ ವಾತಾವರಣ ಹಿನ್ನೆಲೆ ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಕಿರಣ್ ರಿಜಿಜು ಪ್ರಯಾಣಿಸುತ್ತಿದ್ದ ಹೆಲಿಕಾಫ್ಟರ್ ಇಟಾನಗರದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ. 
ಎಂಐ-17 ಹೆಲಿಕಾಫ್ಟರ್ ಸಚಿವರು ಸೇರಿದಂತೆ ಇತರೆ 7 ಜನ ಪ್ರಯಾಣಿಕರನ್ನು ಹೊತ್ತು ಗುವಾಹಟಿಯಿಂದ ಅರುಣಾಚಲ ಪ್ರದೇಶದ ಜೈರೋಗೆ ತೆರಳುತ್ತಿತ್ತು ಈ ವೇಳೆ ಮಾರ್ಗ ಮಧ್ಯದಲ್ಲಿ ಭಾರೀ ಮಳೆ ಹಾಗೂ ಮಂಜು ಕವಿದ ಹಿನ್ನೆಲೆಯಲ್ಲಿ ಹೆಲಿಕಾಫ್ಟರ್ ತುರ್ತು ಭೂಸ್ಪರ್ಶ ಮಾಡಿಸಲಾಗಿದೆ. 
ಹೆಲಿಕಾಫ್ಟರ್ ತುರ್ತು ಭೂಸ್ಪರ್ಶ ಹಿನ್ನೆಲೆ ಸಚಿವರು ಸೇರಿದಂತೆ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬಿಎಸ್ಎಫ್ ಪೈಲಟ್ ಗಳು ಸುರಕ್ಷಿತವಾಗಿ ಹೆಲಿಕಾಫ್ಟರ್ ಅನ್ನು ಲ್ಯಾಂಡ್ ಮಾಡಿಸಿದ್ದರಿಂದ ನಾವು ಸುರಕ್ಷಿತವಾಗಿದ್ದೇವೆ ಎಂದು ಸಚಿವ ರಿಜಿಜು ಅವರು ಹೇಳಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com