ಬಸ್ಸಲ್ಲೇ ಬಿಜೆಪಿ ನಾಯಕನಿಂದ ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನ: ವಿಡಿಯೋ ವೈರಲ್

ಮಹಾರಾಷ್ಟ್ರದ ಗಡ್ ಚಿರೋಲಿ ಜಿಲ್ಲೆಯ ಬಿಜೆಪಿ ಸ್ಥಳೀಯ ನಾಯಕ ರವೀಂದ್ರ ಬವಂಥಡೆ ಎಂಬಾತ ಇತರ ಪ್ರಯಾಣಿಕರು ಪ್ರಯಾಣಿಸುತ್ತಿರುವ ಬಸ್ಸಿನಲ್ಲಿಯೇ ಎಲ್ಲರ ಸಮ್ಮುಖದಲ್ಲಿ ಮಹಿಳೆಯೊಬ್ಬರನ್ನು ಬಲವಂತವಾಗಿ ಚುಂಬಿಸಿ ಆಕೆಯ ಮೇಲೆ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on
ಮುಂಬೈ: ಮಹಾರಾಷ್ಟ್ರದ ಗಡ್ ಚಿರೋಲಿ ಜಿಲ್ಲೆಯ ಬಿಜೆಪಿ ಸ್ಥಳೀಯ ನಾಯಕ ರವೀಂದ್ರ ಬವಂಥಡೆ ಎಂಬಾತ ಇತರ ಪ್ರಯಾಣಿಕರು ಪ್ರಯಾಣಿಸುತ್ತಿರುವ ಬಸ್ಸಿನಲ್ಲಿಯೇ ಎಲ್ಲರ ಸಮ್ಮುಖದಲ್ಲಿ ಮಹಿಳೆಯೊಬ್ಬರನ್ನು ಬಲವಂತವಾಗಿ ಚುಂಬಿಸಿ ಆಕೆಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿರುವ ಘಟನೆ ನಡೆದಿದೆ. 
ರವೀಂದ್ರ ಬವಂಥಡೆ ಅವರು ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನಿಸಿರುವ ದೃಶ್ಯಾವಳಿಗಳು ಬಸ್ ನಲ್ಲಿದ್ದ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಈ ದೃಶ್ಯಾವಳಿಗಳ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. 
ನಾಗ್ಪುರದಿಂದ ಚಂದ್ರಾಪುರದ ಗಡ್ಚಿರೊಲಿ ಜಿಲ್ಲೆಗೆ ಬಸ್ ತೆರಳುತ್ತಿದ್ದ ವೇಳೆ ಬಿಜೆಪಿ ನಾಯಕ ತನ್ನ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದ ಎಂದು ಮಹಿಳೆ ಹೇಳಿಕೊಂಡಿದ್ದು, ಬಿಜೆಪಿ ನಾಯಕರ ವಿರುದ್ದ ಪೊಲೀಸರಿಗೆ ದೂರು ನೀಡಿದ್ದಾಳೆ. ಬಂಧನ ಭೀತಿಯಿಂದ ರವೀಂದ್ರ ತಲೆಮರೆಸಿಕೊಂಡಿದ್ದು, ಅತ್ಯಾಚಾರ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಬಿಜೆಪಿ ನಾಯಕನಿಗಾಗಿ ಹುಡುಕಾಟ ಆರಂಭಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com