ಮೇಕೆದಾಟು ಅಣೆಕಟ್ಟು ನಿರ್ಮಾಣಕ್ಕೆ ತಾಂತ್ರಿಕ ಅನುಮತಿ ಕೋರಿ ಕರ್ನಾಟಕ ಸರ್ಕಾರ ಕೇಂದ್ರ ಜಲ ಆಯೋಗಕ್ಕೆ ಮನವಿ ಮಾಡಿ, ಯೋಜನೆಯ ವಿಸ್ತೃತ ವರದಿ ಸಲ್ಲಿಸಿದೆ ಎಂಬ ಮಾಧ್ಯಮಗಳ ವರದಿಯ ಹಿನ್ನೆಲೆಯಲ್ಲಿ ಪಳನಿಸ್ವಾಮಿ ಅವರು ಇಂದು ಕೇಂದ್ರ ಜಲ ಸಂಪನ್ಮೂಲ ಸಚಿವೆ ಉಮಾ ಭಾರತಿಯವರಿಗೆ ಪತ್ರ ಬರೆದಿದ್ದು, ಸದ್ಯದ ಪರಿಸ್ಥಿತಿಯಲ್ಲಿ ಮೇಕೆದಾಟು ಅಣೆಕಟ್ಟು ನಿರ್ಮಾಣಕ್ಕೆ ತಾಂತ್ರಿಕ ಒಪ್ಪಿಗೆ ನೀಡದಂತೆ ಜಲ ಆಯೋಗದ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸುವಂತೆ ಮನವಿ ಮಾಡಿದ್ದಾರೆ.