ಜಿಎಸ್ ಟಿ ಆಯ್ತು, ಈಗ ರಾಜಕೀಯ ಪಕ್ಷಗಳ ದೇಣಿಗೆ ಮೇಲೆ ಕೇಂದ್ರದ ಕಣ್ಣು!

ಜಿಎಸ್ ಟಿ ಜಾರಿಯಾದ ಬೆನ್ನಲ್ಲೇ ಇದೀಗ ರಾಜಕೀಯ ಪಕ್ಷಗಳ ದೇಣಿಗೆ ಮೇಲೆ ಕಣ್ಣಿಟ್ಟಿರುವ ಕೇಂದ್ರ ಸರ್ಕಾರ, ದೇಣಿಗೆ ಸಂಗ್ರಹ ವ್ಯವಸ್ಥೆ ಶುದ್ಧೀಕರಿಸಲು ಮಹತ್ವದ ಕ್ರಮ ಕೈಗೊಳ್ಳುವುದಾಗಿ ಘೋಷಣೆ ಮಾಡಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ನವದೆಹಲಿ: ಜಿಎಸ್ ಟಿ ಜಾರಿಯಾದ ಬೆನ್ನಲ್ಲೇ ಇದೀಗ ರಾಜಕೀಯ ಪಕ್ಷಗಳ ದೇಣಿಗೆ ಮೇಲೆ ಕಣ್ಣಿಟ್ಟಿರುವ ಕೇಂದ್ರ ಸರ್ಕಾರ, ದೇಣಿಗೆ ಸಂಗ್ರಹ ವ್ಯವಸ್ಥೆ ಶುದ್ಧೀಕರಿಸಲು ಮಹತ್ವದ ಕ್ರಮ ಕೈಗೊಳ್ಳುವುದಾಗಿ ಘೋಷಣೆ ಮಾಡಿದೆ.

ಈ ಬಗ್ಗೆ ಸ್ವತಃ ಕೇಂದ್ರ ಸಚಿವ ಅರುಣ್ ಜೇಟ್ಲಿ ಅವರು ಮಾಹಿತಿ ನೀಡಿದ್ದು, ಶೀಘ್ರದಲ್ಲೇ ಕೇಂದ್ರ ಸರ್ಕಾರ ರಾಜಕೀಯ ಪಕ್ಷಗಳ ದೇಣಿಗೆ ಸಂಗ್ರಹ ವ್ಯವಸ್ಥೆ ಕುರಿತಂತೆ ಕೆಲ ನಿರ್ಣಯಗಳನ್ನು ಕೈಗೊಳ್ಳಲಿದೆ ಎಂದು ಹೇಳಿದ್ದಾರೆ.  ಅಂದುಕೊಂಡಂತೆ ಜಿಎಸ್ ಟಿ ಕಾಯ್ದೆ ಜಾರಿಗೆ ತರಲಾಗಿದ್ದು, ಇದೀಗ ರಾಜಕೀಯ ಪಕ್ಷಗಳಲ್ಲಿನ ದೇಣಿಗೆ ಸಂಗ್ರಹ ವ್ಯವಸ್ಥೆಯನ್ನು ಶುದ್ಧೀಕರಿಸುವ ಕುರಿತು ಕೇಂದ್ರ ಸರ್ಕಾರ ಚಿಂತನೆಯಲ್ಲಿ ತೊಡಗಿದೆ. ಈ ಬಗ್ಗೆ ಶೀಘ್ರದಲ್ಲೇ ಕೆಲ  ಮಹತ್ವದ ನಿರ್ಣಯಗಳನ್ನು ಪ್ರಕಟಿಸುತ್ತೇವೆ ಎಂದು ಜೇಟ್ಲಿ ಹೇಳಿದ್ದಾರೆ.

ಕಳೆದ 70 ವರ್ಷಗಳಿಂದಲೂ ಜಾರಿಯಲ್ಲಿರುವ ರಾಜಕೀಯ ದೇಣಿಗೆ ಸಂಗ್ರಹ ವ್ಯವಸ್ಥೆಯಿಂದಾಗಿ ವಿಶ್ವದ ಅತ್ಯಂತ ದೊಡ್ಡ ಪ್ರಜಾ ಪ್ರಭುತ್ವ ದೇಶವಾಗಿರುವ ಭಾರತಕ್ಕೆ ಯಾವುದೇ ರೀತಿಯ ಪ್ರಯೋಜನವಾಗಿಲ್ಲ. ಹೀಗಾಗಿ ಪ್ರಧಾನಿ  ನರೇಂದ್ರ ಮೋದಿ ಅವರು ರಾಜಕೀಯ ದೇಣಿಗೆ ಸಂಗ್ರಹ ವ್ಯವಸ್ಥೆಯಲ್ಲಿ ಸುಧಾರಣೆ ತರಲು ನಿರ್ಧರಿಸಿದ್ದಾರೆ. ಇನ್ನು ಕೇಂದ್ರ ಸರ್ಕಾರ ಈ ಕಾರ್ಯಕ್ಕೆ ಮೊದಲ ಪ್ರಾಶಸ್ತ್ಯ ನೀಡಲಿದೆ ಎಂದು ಅರುಣ್ ಜೇಟ್ಲಿ ಹೇಳಿದ್ದಾರೆ.

ಈ ಹಿಂದೆ ಜೇಟ್ಲಿ ಮಂಡಿಸಿದ ಬಜೆಟ್ ಮಂಡನೆ ವೇಳೆಯಲ್ಲೂ ಕೂಡ ರಾಜಕೀಯ ಪಕ್ಷಗಳ ದೇಣಿಗೆ ಸಂಗ್ರಹ ಕುರಿತಂತೆ ಜೇಟ್ಲಿ ಹಲವು ಸುಧಾರಣಾ ಕ್ರಮಗಳನ್ನು ಮಂಡಿಸಿದ್ದರು. ಈ ಪೈಕಿ 5 ಸಾವಿರಕ್ಕೂ ಅಧಿಕ ಮೊತ್ತದ ಹಣವನ್ನು  ದೇಣಿಗೆ ನೀಡ ಬಯಸುವವರು ಕ್ಯಾಶ್ ಲೆಸ್ ಅಥವಾ ಡಿಜಿಟಲ್ ಪಾವತಿ ಮೂಲಕ, ಇಲ್ಲವೇ ಚೆಕ್ ಅಥವಾ ಡಿಡಿ ಮೂಲಕ ನೀಡಬೇಕು ಎಂಬ ಮಹತ್ವದ ನಿರ್ಧಾರ ಕೈಗೊಂಡಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com