ಮಹಿಳೆ ಮೇಲೆ ಹಲ್ಲೆ ಆರೋಪ: ಮೂವರು ಎಎಪಿ ಶಾಸಕರ ವಿರುದ್ಧ ಕೇಸ್ ದಾಖಲು

ದೆಹಲಿ ವಿಧಾನಸಭೆ ಆವರಣದಲ್ಲಿ ಮಹಿಳೆಯೊಬ್ಬರೊಂದಿಗೆ ಅಸಭ್ಯವಾಗಿ ವರ್ತಿಸಿ ಹಲ್ಲೆ ನಡೆಸಿದ ಆರೋಪದ ಮೇಲೆ ದೆಹಲಿ.....
ಸೋಮನಾಥ್ ಭಾರ್ತಿ
ಸೋಮನಾಥ್ ಭಾರ್ತಿ
ನವದೆಹಲಿ: ದೆಹಲಿ ವಿಧಾನಸಭೆ ಆವರಣದಲ್ಲಿ ಮಹಿಳೆಯೊಬ್ಬರೊಂದಿಗೆ ಅಸಭ್ಯವಾಗಿ ವರ್ತಿಸಿ ಹಲ್ಲೆ ನಡೆಸಿದ ಆರೋಪದ ಮೇಲೆ ದೆಹಲಿ ಪೊಲೀಸರು ಆಮ್ ಆದ್ಮಿ ಪಕ್ಷದ ಮೂವರು ಶಾಸಕರ ವಿರುದ್ಧ ಗುರುವಾರ ಕೇಸ್ ದಾಖಲಿಸಿದ್ದಾರೆ.
ಒಖ್ಲಾ ಎಎಪಿ ಶಾಸಕ ಅಮನತುಲ್ಲಾ ಖಾನ್, ಮಲ್ವಿಯಾ ನಗರ ಶಾಸಕ ಸೋಮನಾಥ್ ಭಾರ್ತಿ ಹಾಗೂ ತಿಲಕ್ ನಗರ ಶಾಸಕ ಜರ್ನೈಲ್ ಸಿಂಗ್ ಅವರು ಜೂನ್ 28ರಂದು ತನ್ನ ಮೇಲೆ ಹಲ್ಲೆ ನಡೆಸಿರುವುದಾಗಿ ಮಹಿಳೆ ಪೊಲೀಸರಿಗೆ ದೂರು ನೀಡಿದ್ದಾರೆ.
ಅಂದು ನಾನು ವಿಧಾನಸಭೆ ಕಲಾಪ ವೀಕ್ಷಿಸಲು ಆಗಮಿಸಿದ್ದೆ. ಆದರೆ ನನಗೆ ಪ್ರೇಕ್ಷಕರ ಗ್ಯಾಲರಿಗೆ ತೆರಳಲು ಪಾಸ್ ಸಿಗಲಿಲ್ಲ. ಹೀಗಾಗಿ ವಿಧಾನಸಭೆ ಹೊರಗಡೆ ನಿಂತಿದ್ದೆ. ಈ ವೇಳೆ ನನ್ನ ಬಳಿಗೆ ಬಂದ ಗುಂಪೊಂದು ಕೋಣೆಗೆ ಕರೆದುಕೊಂಡು ಹೋಗಿ ಹಲ್ಲೆ ನಡೆಸಿದ್ದಾರೆ ಎಂದು ಮಹಿಳೆ ತನ್ನ ದೂರಿನಲ್ಲಿ ಆರೋಪಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಇನ್ನು ಮಹಿಳೆಯ ಆರೋಪವನ್ನು ಸ್ಪಷ್ಟವಾಗಿ ತಳ್ಳಿಹಾಕಿರುವ ಆಮ್ ಆದ್ಮಿ ಪಕ್ಷದ ನಾಯಕ ಸಂಜಯ್ ಸಿಂಗ್ ಅವರು, ಇದೊಂದು ರಾಜಕೀಯ ಪಿತೂರಿ ಎಂದು ಆರೋಪಿಸಿದ್ದಾರೆ.
ಇಂದು ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಸಂಜಯ್ ಸಿಂಗ್ ಅವರು, ಕೇಂದ್ರ ಸರ್ಕಾರ ಸೇಡಿನ ರಾಜಕಾರಣ ಮಾಡುತ್ತಿದೆ ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com