ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ
ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಕೋಮುಗಲಭೆ ಪ್ರಕರಣ: ಬಿಜೆಪಿ ವಿರುದ್ದ ಮಮತಾ ಬ್ಯಾನರ್ಜಿ ಕಿಡಿ

ಸಾಮಾಜಿಕ ಜಾಲತಾಣಗಳನ್ನು ದುರ್ಬಳಕೆ ಮಾಡಿಕೊಳ್ಳಲಾಗಿದ್ದು, ಬಿಜೆಪಿ ಸಾಮಾಜಿಕ ಜಾಲತಾಣಗಳ ಮೂಲಕ ವದಂತಿಗಳನ್ನು ಹಬ್ಬಿಸುತ್ತಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರು ಬುಧವಾರ ಹೇಳಿದ್ದಾರೆ...
ಕೋಲ್ಕತಾ: ಸಾಮಾಜಿಕ ಜಾಲತಾಣಗಳನ್ನು ದುರ್ಬಳಕೆ ಮಾಡಿಕೊಳ್ಳಲಾಗಿದ್ದು, ಬಿಜೆಪಿ ಸಾಮಾಜಿಕ ಜಾಲತಾಣಗಳ ಮೂಲಕ ವದಂತಿಗಳನ್ನು ಹಬ್ಬಿಸುತ್ತಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರು ಬುಧವಾರ ಹೇಳಿದ್ದಾರೆ, 
ಪಶ್ಚಿಮ ಬಂಗಾಳದಲ್ಲಿ ಸಂಭವಿಸಿದ ಕೋಮುಗಲಭೆ ಪ್ರಕರಣ ಸಂಬಂಧ ಪ್ರತಿಕ್ರಿಯೆ ನೀಡಿರುವ ಅವರು, ರಾಜ್ಯದಲ್ಲಿ ಶಾಂತಿ, ಸೌಹಾರ್ದತೆಯನ್ನು ಕಾಪಾಡಲು ನಮ್ಮ ಸರ್ಕಾರ ಬದ್ಧವಾಗಿದೆ. ಆದರೆ, ಸಾಮಾಜಿಕ ಜಾಲತಾಣಗಳನ್ನು ದುರ್ಬಳಕೆ ಮಾಡಲಾಗುತ್ತಿದೆ. ಬಿಜೆಪಿಯವರು ಸಾಮಾಜಿಕ ಜಾಲತಾಣಗಳ ಮೂಲಕ ಬಿಜೆಪಿಯವರು ವದಂತಿಗಳನ್ನು ಹಬ್ಬಿಸುತ್ತಿದ್ದಾರೆ. ಬಿಜೆಪಿಯವರಿಗೆ ಇದು ಟ್ರೆಂಡ್ ಆಗಿ ಹೋಗಿದೆ. ಹೀಗಾಗಿಯೇ ನಾವು ಜನರಿಗೆ ಎಚ್ಚರಿಕೆಗಳನ್ನು ಹೇಳುತ್ತಿದ್ದೇವೆಂದು ಹೇಳಿದ್ದಾರೆ. 
 ಸೇನಾ ಯೋಧರನ್ನು ನಿಯೋಜಿಸಿರುವುದು ರಾಜ್ಯದಲ್ಲಿ ಶಾಂತಿ ಕಾಪಾಡುವ ಸಲುವಾಗಿ. ಕೋಮು ಸೌಹಾರ್ದರತೆ ಕಾಪಾಡುವ ಸಲುವಾಗಿ ರಾಜ್ಯದಲ್ಲಿ 60 ಸಾವಿರ ಶಾಂತಿ ಬಾಹಿನಿಯನ್ನು ತೆರೆಯಲಾಗಿದೆ ಎಂದು ಹೇಳಿದ್ದಾರೆ. 
ಬಿಜೆಪಿಯವರು ರಾಜ್ಯದಲ್ಲಿ ಕೋಮು ಗಲಭೆ ಸೃಷ್ಟಿಸಲು ಯತ್ನ ನಡೆಸುತ್ತಿದೆ. ಬಿಜೆಪಿಯವರು ಸಾಮಾಜಿಕ ಜಾಲಗಳ ಮೂಲಕ ವದಂತಿಂಗಳನ್ನು ಹಬ್ಬಿಸುತ್ತಿದ್ದು, ಇದು ಬಿಜೆಪಿಯವರ ಆಧುನಿಕ ವಿನ್ಯಾಸವಾಗಿದೆ. ದೇಶದ ಇತರೆ ರಾಜ್ಯಗಳಲ್ಲಿ ನಡೆಯುತ್ತಿರುವ ಘಟನೆಗಳನ್ನು ನಾನು ಗಮನಿಸುತ್ತಿದ್ದೇನೆ. ಇದೀಗ ನಮ್ಮ ರಾಜ್ಯದಲ್ಲೂ ಅಂತಹ ಪರಿಸ್ಥಿತಿ ಎದುರಾಗಿದೆ. ಈ ಬಗ್ಗೆ ಜನರು ಎಚ್ಚರಿಕೆಯಿಂದರಬೇಕೆಂದು ಈ ಮೂಲಕ ಹೇಳುತ್ತಿದ್ದೇನೆ. ಗಲಭೆ ಸೃಷ್ಟಿಸಲು ಬಿಜೆಪಿಯವರ ಬಳಿ ಪರವಾನಗಿಯಿಲ್ಲ. ಆದರೂ ಅವರು ಮಾಡುತ್ತಿದ್ದಾರೆ. ಜನರದಲ್ಲಿ ದ್ವೇಷವನ್ನು ಹುಟ್ಟುಹಾಕುತ್ತಿದ್ದಾರೆ. 
ಬಾಂಗ್ಲಾದೇಶದಲ್ಲಿ ನಡೆದ ಘಟನೆಯ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಾಕಿ, ರಾಜ್ಯದಲ್ಲಿ ಗಲಭೆ ಸೃಷ್ಟಿಸಲು ಯತ್ನ ನಡೆಸುತ್ತಿದ್ದಾರೆಂದು ಆರೋಪಿಸಿದ್ದಾರೆ. 

Related Stories

No stories found.

Advertisement

X
Kannada Prabha
www.kannadaprabha.com