ಲಾಲು ಮನೆ ಮೇಲೆ ಸಿಬಿಐ ದಾಳಿಯನ್ನು ಸ್ವಾಗತಿಸಿದ ಬಿಜೆಪಿ

ಆರ್'ಜೆಡಿ ಮುಖಂಡ ಲಾಲು ಪ್ರಸಾದ್ ಯಾದವ್ ಮನೆ ಮೇಲೆ ನಡೆದಿರುವ ಸಿಬಿಐ ದಾಳಿಯನ್ನು ಬಿಜೆಪಿ ಸ್ವಾಗತಿಸಿದೆ.
ಲಾಲು ಮನೆ ಮೇಲೆ ಸಿಬಿಐ ದಾಳಿಯನ್ನು ಸ್ವಾಗತಿಸಿದ ಬಿಜೆಪಿ
ಪಾಟ್ನಾ: ಆರ್'ಜೆಡಿ ಮುಖಂಡ ಲಾಲು ಪ್ರಸಾದ್ ಯಾದವ್ ಮನೆ ಮೇಲೆ ನಡೆದಿರುವ ಸಿಬಿಐ ದಾಳಿಯನ್ನು ಬಿಜೆಪಿ ಸ್ವಾಗತಿಸಿದೆ. 
ಲಾಲು ಪ್ರಸಾದ್ ಯಾದವ್ ನಿವಾಸದ ಮೇಲೆ ಸಿಬಿಐ ದಾಳಿ ನಡೆದಿದ್ದು, ಬಿಹಾರ ಸಿಎಂ ನಿತೀಶ್ ಕುಮಾರ್ ಆರ್ ಜೆಡಿಯೊಂದಿಗಿನ ಮೈತ್ರಿಯನ್ನು ಅಂತ್ಯಗೊಳಿಸಲು ಇದು ಅತ್ಯುತ್ತಮ ಸಮಯವಾಗಿದೆ. ನಿತೀಶ್ ಕುಮಾರ್ ತಮ್ಮ ಸಂಪುಟದಲ್ಲಿರುವ ಲಾಲು ಪ್ರಸಾದ್ ಯಾದವ್ ಅವರ ಇಬ್ಬರೂ ಪುತ್ರರನ್ನು ವಜಾಗೊಳಿಸಬೇಕೆಂದು ಬಿಜೆಪಿ ರಾಜ್ಯಾಧ್ಯಕ್ಷ ನಿತ್ಯಾನಂದ ರಾಯ್ ಸಲಹೆ ನೀಡಿದ್ದಾರೆ. 
ಸಿಬಿಐ ದಾಳಿಯ ನಂತರ ಬಿಹಾರದಲ್ಲಿ ರಾಜಕೀಯ ಬದಲಾವಣೆಯಾಗಲಿದೆ ಎಂದು ನಿತ್ಯಾನಂದ ರಾಯ್ ಹೇಳಿದ್ದರೆ, ನಿತೀಶ್ ಕುಮಾರ್ ಲಾಲು ಪುತ್ರರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಬಿಹಾರ ವಿಪಕ್ಷ ನಾಯಕ ಪ್ರೇಮ್ ಕುಮಾರ್ ಒತ್ತಾಯಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com