ಜಮ್ಮು: ಕಾಶ್ಮೀರದಲ್ಲಿ ಉದ್ವಿಗ್ನ ಪರಿಸ್ಥಿತಿ ಉಂಟಾಗಿದ್ದು, ಅಮರನಾಥ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ. ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆ ಉಗ್ರ ಬುರ್ಹಾನ್ ವನಿಯ ಹತ್ಯೆಯಾಗಿ ಒಂದು ವರ್ಷವಾಗಿದ್ದು, ಕಾಶ್ಮೀರದಲ್ಲಿ ಉದ್ವಿಗ್ನ ಪರಿಸ್ಥಿತಿ ಉಂಟಾಗಿದೆ.
ತ್ರಾಲ್ ಸೇರಿದಂತೆ ಕಾಶ್ಮೀರದ ಹಲವು ಪ್ರದೇಶಗಳಲ್ಲಿ ಕರ್ಫ್ಯೂ ವಿಧಿಸಲಾಗಿದ್ದು, ನಿರ್ಬಂಧ ಹೇರಲಾಗಿದೆ. ಕಣಿವೆ ರಾಜ್ಯದಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡಿರುವ ಹಿನ್ನೆಲೆಯಲ್ಲಿ ಅಮರನಾಥ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ.
ಕಾನೂನು ಸುವ್ಯವಸ್ಥೆ ಕಾರಣದಿಂದಾಗಿ ಭಗವತಿ ನಗರ ಬೇಸ್ ಕ್ಯಾಂಪ್ ನಿಂದ ಯತರೆಯನ್ನು ಸ್ಥಗಿತಗೊಳಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ. ಈ ವರೆಗೂ 1,15,841 ಯಾತ್ರಾರ್ಥಿಗಳು ಅಮರನಾಥ ಗುಹೆಯ ದರ್ಶನ ಮಾಡಿದ್ದಾರೆ.