ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಚೀನಾಕ್ಕೆ ಸೆಡ್ಡು ಹೊಡೆದ ಭಾರತ: ಗಣರಾಜ್ಯೋತ್ಸವ ಪರೇಡ್ ಗೆ ಆಸಿಯಾನ್ ರಾಷ್ಟ್ರಗಳಿಗೆ ಆಹ್ವಾನ!

ಗಡಿರೇಖೆಯಲ್ಲಿ ಭಾರತೀಯ ಮತ್ತು ಚೀನಾದ ಸೈನ್ಯಗಳ ನಡುವಿನ ಬಿಕ್ಕಟ್ಟು ಮುಂದುವರಿಕೆ ಸಂದರ್ಭದಲ್ಲಿ ಚೀನಾಕ್ಕೆ ಸೆಡ್ಡು ಹೊಡೆಯಲು ಮುಂದಾಗಿರುವ ಭಾರತ ...
Published on
ನವದೆಹಲಿ: ಗಡಿರೇಖೆಯಲ್ಲಿ ಭಾರತೀಯ ಮತ್ತು ಚೀನಾದ ಸೈನ್ಯಗಳ ನಡುವಿನ ಬಿಕ್ಕಟ್ಟು ಮುಂದುವರಿಕೆ ಸಂದರ್ಭದಲ್ಲಿ ಚೀನಾಕ್ಕೆ ಸೆಡ್ಡು ಹೊಡೆಯಲು ಮುಂದಾಗಿರುವ ಭಾರತ ಮುಂದಿನ 69ನೇ ವರ್ಷದ ಗಣರಾಜ್ಯೋತ್ಸವ ಪರೇಡ್ ಗೆ ಆಗ್ನೇಯ ಏಷ್ಯಾದ ರಾಷ್ಟ್ರಗಳ ಸಂಘ(ಆಸಿಯಾನ್)ದ ಮುಖ್ಯಸ್ಥರನ್ನು ಆಹ್ವಾನಿಸುವ ಯೋಜನೆ ಹಮ್ಮಿಕೊಂಡಿದೆ.
ವಿದೇಶಾಂಗ ವ್ಯವಹಾರಗಳ ಸಚಿವೆ ಸುಷ್ಮಾ ಸ್ವರಾಜ್  ಮೊನ್ನೆ ಬುಧವಾರ ಭಾರತ-ಆಸಿಯಾನ್ ಮಾತುಕತೆಯ 9ನೇ ಆವೃತ್ತಿಯಲ್ಲಿ ಈ ಘೋಷಣೆ ಮಾಡಿದ್ದಾರೆ.
10 ಸದಸ್ಯ ರಾಷ್ಟ್ರಗಳನ್ನು ಹೊಂದಿರುವ ಆಸಿಯಾನ್  ದೇಶಗಳ ಜೊತೆ ಭಾರತದ ಸಂಬಂಧವನ್ನು ವೃದ್ಧಿಸಲು ಪ್ರಯತ್ನಗಳು ನಡೆಯುತ್ತಿವೆ. 'ಈಸ್ಟ್ ಪಾಲಿಸಿ ಆಕ್ಟ್' ನ ಹೃದಯದಲ್ಲಿ ಆಸಿಯಾನ್ ರಾಷ್ಟ್ರಗಳಿಗೆ ಸ್ಥಾನ ಕಲ್ಪಿಸಲಾಗುತ್ತಿದೆ. ಆಸಿಯಾನ್  ರಾಷ್ಟ್ರ ಸ್ಥಾಪನೆಯ ಶತಮಾನೋತ್ಸವದ ಕನಸಿನ ಮಧ್ಯದಲ್ಲಿದ್ದೇವೆ. ಆಸಿಯಾನ್ ಮತ್ತು ಭಾರತ ಸಹಜ ಪಾಲುದಾರ ದೇಶಗಳಾಗಿದ್ದು ಭೌಗೋಳಿಕ, ಐತಿಹಾಸಿಕ ಮತ್ತು ನಾಗರಿಕ ಸಂಬಂಧಗಳನ್ನು ಹೊಂದಿವೆ ಎಂದು ಸುಷ್ಮಾ ಸ್ವರಾಜ್ ಹೇಳಿರುವುದಾಗಿ ಇಂಗ್ಲಿಷ್ ಪತ್ರಿಕೆಯೊಂದು ವರದಿ ಮಾಡಿದೆ. 
ಆಗ್ನೇಯ ಏಷ್ಯಾದಲ್ಲಿ ನಮ್ಮ ಸಂಬಂಧವನ್ನು ವೃದ್ಧಿಸಿಕೊಂಡಿದ್ದೇವೆ. ಅದು 2014ರಲ್ಲಿ ಪ್ರಧಾನಿ ಮೋದಿಯವರು ಮ್ಯಾನ್ಮಾರ್ ನಲ್ಲಿ ನಡೆದ ಭಾರತ-ಏಷ್ಯಾ ಶೃಂಗಸಭೆಯಲ್ಲಿ ಮಾಡಿದ ಭಾಷಣದಿಂದ ಗೊತ್ತಾಗಿದೆ. ಅಲ್ಲಿ ಮೋದಿಯವರು. ಭಾರತದ ಪೂರ್ವ ನೀತಿ ಈಸ್ಟ್ ಪಾಲಿಸಿ ಆಕ್ಟ್ ಎಂದಾಗಿದೆ ಎಂದು ಹೇಳಿದ್ದರು ಎಂದು ಸುಷ್ಮಾ ಸ್ವರಾಜ್ ನೆನಪು ಮಾಡಿಕೊಂಡರು.
ಬ್ರುನೈ, ಕಾಂಬೋಡಿಯಾ, ಇಂಡೋನೇಷಿಯಾ, ಲಾವೋಸ್, ಮಲೇಷಿಯಾ, ಮ್ಯಾನ್ಮಾರ್, ಫಿಲಿಪೈನ್ಸ್, ಸಿಂಗಪೂರ್, ಥಾಯ್ಲೆಂಡ್ ಮತ್ತು ವಿಯೆಟ್ನಾಂಗಳು ಆಸಿಯಾನ್  ರಾಷ್ಟ್ರಗಳ ಸದಸ್ಯ ರಾಷ್ಟ್ರಗಳಾಗಿವೆ.
ಭಾರತ ಮತ್ತು ಆಸಿಯಾನ್ ರಾಷ್ಟ್ರಗಳ ನಡುವೆ ಸಂಬಂಧ ಮತ್ತು ಮಾತುಕತೆ ನಡೆದು 25 ವರ್ಷಗಳು ಕಳೆದಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com