ಪಶ್ಚಿಮ ಬಂಗಾಳದಲ್ಲಿಂದು ಕಾನೂನು ಮತ್ತು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ. ಪಶ್ಚಿಮ ಬಂಗಾಳ ರಾಜ್ಯಕ್ಕೆ ಕೇಂದ್ರ ಸರ್ಕಾರ ಸಹಕಾರ ನೀಡುತ್ತಿಲ್ಲ ಎಂದು ಮಮತಾ ಬ್ಯಾನರ್ಜಿಯವರು ಹೇಳುತ್ತಿದ್ದಾರೆ, ಕೇಂದ್ರ ಸರ್ಕಾರ ಸಹಕಾರ ನೀಡುತ್ತಿಲ್ಲ ಎಂಬುದೇ ಆದರೆ, ಕೇಂದ್ರದಿಂದ ಮತ್ತೇನನ್ನು ಕೇಳುತ್ತಿದ್ದಾರೆ? ರಾಜ್ಯದಲ್ಲಿ ಆಡಳಿತ ನಡೆಸಲು ಸಾಧ್ಯವಾಗದಿದ್ದರೆ, ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತ ಹೇರಲು ಬಿಡಲಿ. ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಮರು ಸ್ಥಾಪನೆಗೊಳ್ಳಲಿ. ರಾಜ್ಯದಲ್ಲಿ ನಿರ್ಮಾಣವಾಗಿರುವ ಪರಿಸ್ಥಿತಿಗೆ ಕೇಂದ್ರವನ್ನು ದೂಷಿಸುವುದು ಅವರ ಅಸಮರ್ಥತೆಯನ್ನು ತೋರಿಸುತ್ತದೆ ಎಂದು ತಿಳಿಸಿದ್ದಾರೆ.