ಬೀಫ್ ನಿಷೇಧ ಪರಿಣಾಮಕಾರಿ ಜಾರಿಗೆ ಮುಂದಾದ ಮಹಾರಾಷ್ಟ್ರ: ಶೀಘ್ರ ಬರಲಿದೆ ಬೀಫ್ ಡಿಟೆಕ್ಟರ್ ಕಿಟ್

ಮುಂಬೈ: ಕೇಂದ್ರ ಸರ್ಕಾರದ ಗೋಮಾಂಸ ನಿಷೇಧ ಕಾಯ್ದೆಯನ್ನು ಮಹಾರಾಷ್ಟ್ರದಲ್ಲಿ ಪರಿಣಾಮಕಾರಿಯಾಗಿ ಜಾರಿ ಮಾಡುವ ನಿಟ್ಟಿನಲ್ಲಿ ಕ್ರಮಕ್ಕೆ ಮುಂದಾಗಿರುವ ಮಹಾರಾಷ್ಟ್ರ ಪೊಲೀಸರು ಬೀಫ್ ಡಿಟೆಕ್ಟರ್ ಕಿಟ್ ಅನ್ನು ಬಳಕೆ ಮಾಡಲು ನಿರ್ಧರಿಸಿದ್ದಾರೆ.
ಮಹಾರಾಷ್ಟ್ರದ ವಿಧಿವಿಜ್ಞಾನ ಪ್ರಯೋಗಾಲಯದ ಸಿಬ್ಬಂದಿ ಈ ಬೀಫ್ ಡಿಟೆಕ್ಟರ್ ಕಿಟ್ ಗಳನ್ನು ತಯಾರಿಸಿದ್ದು, ಶೀಘ್ರದಲ್ಲೇ ಈ ಕಿಟ್ ಗಳನ್ನು ಮಹಾರಾಷ್ಟ್ರ ಪೊಲೀಸರಿಗೆ ಹಸ್ತಾಂತರಿಸಲಿದ್ದಾರೆ. ಈ ನೂತನ ಕಿಟ್ ಗಳ ಮೂಲಕ ಕೇವಲ 30 ನಿಮಿಷಗಳ ಅಂತರದಲ್ಲಿ ಬೀಫ್ ಮಾಂಸವನ್ನು ಕಂಡುಹಿಡಿಯಬಹುದಾಗಿದೆ ಎಂದು ತಜ್ಞರು ಹೇಳಿದ್ದಾರೆ. ಪ್ರತಿಯೊಂದು ಕಿಟ್ ಗಳಲ್ಲಿಯೂ ಕೂಡ ಕನಿಷ್ಠ 100 ಮಾದರಿಗಳನ್ನು ಪರೀಕ್ಷೆ ಮಾಡಬಹುದಾಗಿದ್ದು, 45 ವಿಧಿವಿಜ್ಞಾನ ಪ್ರಯೋಗಾಲಯದ ಸುಮಾರು 45 ವಾಹನಗಳಲ್ಲಿ ಪ್ರಯೋಗ ಮಾಡಲಾಗುತ್ತದೆ ಎಂದು ತಿಳಿದುಬಂದಿದೆ.
ಒಂದು ವೇಳೆ ಪರೀಕ್ಷೆಯಲ್ಲಿ ಅದು ಗೋ ಮಾಂಸ ಎಂದು ಸಾಬೀತಾದರೆ ಆಗ ಮತ್ತೆ ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ರವಾನಿಸಿ ಡಿಎನ್ ಎ ಪರೀಕ್ಷೆ ಮಾಡಲಾಗುತ್ತದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಈ ಬಗ್ಗೆ ಮಾಹಿತಿ ನೀಡಿರುವ ವಿಧಿವಿಜ್ಞಾನ ಪ್ರಯೋಗಾಲಯ ನಿರ್ದೇಶಕ ಡಾ. ಕೃಷ್ಣ ಕುಲಕರ್ಣಿ ಅವರು, ಸ್ಥಳದಲ್ಲೇ ಬೀಫ್ ಪರೀಕ್ಷೆ ಮಾಡುವ ಕಿಟ್ ಗಳನ್ನು ವಿತರಿಸಲಾಗುತ್ತಿದೆ. ಕಿಟ್ ನಿಂದ ಕೇವಲ ಪ್ರಾಥಮಿಕ ಪರೀಕ್ಷೆ ಮಾತ್ರ ಸಾಧ್ಯವಾಗಲಿದ್ದು, ಒಂದು ವೇಳೆ ಅದು ಗೋಮಾಂಸ ಎಂದು ತಿಳಿದರೆ ಮತ್ತೆ ಡಿಎನ್ ಎ ಪರೀಕ್ಷೆ ಮೂಲಕ ಸಂಪೂರ್ಣ ವಿವರ ಪಡೆಯಬಹುದಾಗಿದೆ ಎಂದು ಅವರು ಮಾಹಿತಿ ನೀಡಿದರು.
ಒಟ್ಟಾರೆ ದೇಶಾದ್ಯಂತ ಗೋರಕ್ಷಣೆ ಹೆಸರಲ್ಲಿ ಉಂಟಾಗುತ್ತಿರುವ ಗಲಭೆ ಮತ್ತು ಹಿಂಸಾಚಾರಕ್ಕೆ ಬ್ರೇಕ್ ಹಾಕುವ ನಿಟ್ಟಿನಲ್ಲಿ ಮಹಾರಾಷ್ಟ್ರ ಪೊಲೀಸರು ಕೈಗೊಂಡಿರುವ ವಿನೂತನ ಕ್ರಮಕ್ಕೆ ಎಲ್ಲಡೆ ಶ್ಲಾಘನೆಗೆ ಪಾತ್ರವಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


