ಸಂಗ್ರಹ ಚಿತ್ರ
ದೇಶ
ಜಮ್ಮು-ಕಾಶ್ಮೀರ: ಇಬ್ಬರು ಉಗ್ರರನ್ನು ಹೊಡೆದುರುಳಿಸಿದ ಸೇನೆ
ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯ ಹಂದ್ವಾರದಲ್ಲಿ ಭಾರತೀಯ ಸೇನಾಪಡೆ ಕಾರ್ಯಾಚರಣೆ ನಡೆಸಿದ್ದು, ಕಾರ್ಯಾಚರಣೆಯಲ್ಲಿ ಇಬ್ಬರು ಉಗ್ರರನ್ನು ಹೊಡೆದುರುಳಿಸಿದೆ ಎಂದು...
ನೌಗಾಮ್: ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯ ಹಂದ್ವಾರದಲ್ಲಿ ಭಾರತೀಯ ಸೇನಾಪಡೆ ಕಾರ್ಯಾಚರಣೆ ನಡೆಸಿದ್ದು, ಕಾರ್ಯಾಚರಣೆಯಲ್ಲಿ ಇಬ್ಬರು ಉಗ್ರರನ್ನು ಹೊಡೆದುರುಳಿಸಿದೆ ಎಂದು ಸೋಮವಾರ ತಿಳಿದುಬಂದಿದೆ.
ಕುಪ್ವಾರ ಜಿಲ್ಲೆಯ ಹಂದ್ವಾರದಲ್ಲಿ ಉಗ್ರರ ಚಲನವಲನಗಳ ಬಗ್ಗೆ ಶಂಕೆಗಳು ವ್ಯಕ್ತವಾಗಿದ್ದೆವು. ಈ ಹಿನ್ನಲೆಯಲ್ಲಿ ಸೇನಾ ಪಡೆ ಇಂದು ಬೆಳಿಗ್ಗೆಯಿಂದಲೇ ಕಾರ್ಯಾಚರಣೆಯನ್ನು ಆರಂಭಿಸಿತ್ತು. ಕಾರ್ಯಾಚರಣೆ ವೇಳೆ ಅಡಗಿ ಕುಳಿತಿದ್ದ ಉಗ್ರರು ಏಕಾಏಕಿ ಸೇನಾ ಪಡೆಗಳೆ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ.
ಈ ವೇಳೆ ಕಾರ್ಯಾಚರಣೆಯನ್ನು ಚುರುಕುಗೊಳಿಸಿದ ಸೇನಾಪಡೆ ಇಬ್ಬರು ಉಗ್ರರನ್ನು ಹೊಡೆದುರುಳಿಸಿದೆ. ಪ್ರಸ್ತುತ ಸ್ಥಳದಲ್ಲಿ ಕಾರ್ಯಾಚರಣೆ ಮುಂದುವರೆದಿದೆ ಎಂದು ವರದಿಗಳು ತಿಳಿಸಿವೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ