ತನಿಖೆ ಪ್ರಗತಿಯಲ್ಲಿದ್ದು, ಅಮರನಾಥ ಯಾತ್ರೆ ಶಾಂತಿಯುತವಾಗಿ ಮುಂದುವರೆಯಲಿದೆ: ಸಿಆರ್'ಪಿಎಫ್ ಐಜಿ

ಅಮರನಾಥ ಯಾತ್ರಾರ್ಥಿಗಳ ಮೇಲಿನ ಉಗ್ರರ ದಾಳಿ ಪ್ರಕರಣದ ತನಿಖೆ ಪ್ರಗತಿಯಲ್ಲಿದ್ದು, ಯಾತ್ರೆ ಶಾಂತಿಯುತವಾಗಿ ಬಿಗಿ ಭದ್ರತೆಯೊಂದಿಗೆ ಮುಂದುವರೆಯಲಿದೆ ಎಂದು ಸಿಆರ್ ಪಿಎಫ್ ಆಜಿ ಜುಸ್ಫಿಕರ್ ಹಸನ್ ಅವರು ಮಂಗಳವಾರ ಹೇಳಿದ್ದಾರೆ...
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ಅನಂತ್ನಾಗ್: ಅಮರನಾಥ ಯಾತ್ರಾರ್ಥಿಗಳ ಮೇಲಿನ ಉಗ್ರರ ದಾಳಿ ಪ್ರಕರಣದ ತನಿಖೆ ಪ್ರಗತಿಯಲ್ಲಿದ್ದು, ಯಾತ್ರೆ ಶಾಂತಿಯುತವಾಗಿ ಬಿಗಿ ಭದ್ರತೆಯೊಂದಿಗೆ ಮುಂದುವರೆಯಲಿದೆ ಎಂದು ಸಿಆರ್ ಪಿಎಫ್ ಆಜಿ ಜುಸ್ಫಿಕರ್ ಹಸನ್ ಅವರು ಮಂಗಳವಾರ ಹೇಳಿದ್ದಾರೆ. 
ಈ ಕುರಿತಂತೆ ಮಾತನಾಡಿರುವ ಅವರು, ಉಗ್ರರ ದಾಳಿ ಪ್ರಕರಣವನ್ನು ಪ್ರಸ್ತುತ ಜಮ್ಮು ಮತ್ತು ಕಾಶ್ಮೀರ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ತನಿಖೆ ಸಮಯವನ್ನು ತೆಗೆದುಕೊಳ್ಳುಲಿದೆ. ಈಗಲೇ ಏನನ್ನೂ ಹೇಳಲು ಸಾಧ್ಯವಿಲ್ಲ. ಆದರೆ, ಶೀಘ್ರದಲ್ಲಿಯೇ ಉಗ್ರರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿದ್ದಾರೆ. 
ನಿನ್ನಯಷ್ಟೇ ರಾತ್ರಿ 8.20 ಸುಮಾರಿಗೆ ಉಗ್ರರ ಗುಂಪೊಂದು ಅಮರನಾಥ ಯಾತ್ರಾರ್ಥಿಗಳಿದ್ದ ಬಸ್ ಮೇಲೆ ದಾಳಿ ನಡೆಸಿತ್ತು. ಬ್ಯಾಟೆಂಗೂ ಹಾಗೂ  ಖಾನಾಬಾಲ್ ಗಳಲ್ಲಿ ಶಸ್ತ್ರಸಜ್ಜಿದ ಭಯೋತ್ಪಾದಕರ ಗುಂಪು ಪೊಲೀಸ್ ಬೆಂಗಾವಲು ಪಡೆಯ ಮೇಲೆ ದಾಳಿ ನಡೆಸಿತ್ತು, ಈ ವೇಳೆ ನಡೆದ ಗುಂಡಿನ ದಾಳಿಯಲ್ಲಿ ಯಾತ್ರಾರ್ಥಿಗಳಿದ್ದ ಬಸ್ ಸಿಲುಕಿಕೊಂಡಿತ್ತು. 
ಉಗ್ರರು ಮನೋಇಚ್ಛೆ ನಡೆಸಿದ್ದ ಗುಂಡಿನ ದಾಳಿಗೆ 7 ಯಾತ್ರಿಗಳು ಸಾವನ್ನಪ್ಪಿದ್ದಾರೆ. ಅಲ್ಲದೆ, 32ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿವೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com