ಸುಪ್ರೀಂಕೋರ್ಟ್‌ನಲ್ಲಿ ಕೇಂದ್ರಕ್ಕೆ ಮುಖಭಂಗ: ಹೊಸ ಗೋಹತ್ಯೆ ಅಧಿಸೂಚನೆಗೆ 'ಸುಪ್ರಿಂ' ತಡೆ

ಗೋಹತ್ಯೆ ನಿಷೇಧ ಅಧಿಸೂಚನೆಗೆ ಸುಪ್ರೀಂಕೋರ್ಟ್ ತಡೆಯಾಜ್ಞೆ ನೀಡಿದ್ದು ಕೇಂದ್ರ ಸರ್ಕಾರಕ್ಕೆ ತೀವ್ರ ಹಿನ್ನಡೆಯಾಗಿದೆ.
ಗೋವು
ಗೋವು
ನವದೆಹಲಿ: ಗೋಹತ್ಯೆ ನಿಷೇಧ ಅಧಿಸೂಚನೆಗೆ ಸುಪ್ರೀಂಕೋರ್ಟ್ ತಡೆಯಾಜ್ಞೆ ನೀಡಿದ್ದು ಕೇಂದ್ರ ಸರ್ಕಾರಕ್ಕೆ ತೀವ್ರ ಹಿನ್ನಡೆಯಾಗಿದೆ. 
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಮೇ 26ರಂದು ದೇಶಾದ್ಯಂತ ಗೋಹತ್ಯೆಯನ್ನು ನಿಷೇಧಿಸಿತ್ತು. ಈ ಸಂಬಂಧ ವಿವರಣೆ ನೀಡುವಂತೆ ಸುಪ್ರೀಂಕೋರ್ಟ್ ಕೇಂದ್ರ ಸರ್ಕಾರಕ್ಕೆ ಸೂಚಿಸಿತ್ತು. ಅಂತೆ ಕೇಂದ್ರ ಸರ್ಕಾರ ಕಾನೂನನ್ನು ಪರಿಷ್ಕರಿಸಿ ಜಾರಿಗೆ ತರಲಾಗುವುದು ಎಂದು ಹೇಳಿತ್ತು. ಕೇಂದ್ರ ಸರ್ಕಾರದ ಈ ಹೇಳಿಕೆಗೆ ಸುಪ್ರೀಂಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ. 
ಜೀವನೋಪಾಯವನ್ನು ಅನಿಶ್ಚಿತತೆಗೆ ಒಳಪಡಿಸಲಾಗುವುದಿಲ್ಲ ಎಂದು ಹೇಳಿರುವ ಸುಪ್ರೀಂಕೋರ್ಟ್ ಕೇಂದ್ರ ಸರ್ಕಾರದ ಗೋಹತ್ಯೆ ನಿಷೇಧ ಕಾನೂನಿಗೆ ತಡೆ ನೀಡಿದೆ. 
ಕೇಂದ್ರ ಸರ್ಕಾರ ದೇಶಾದ್ಯಂತ ಗೋಹತ್ಯೆ ನಿಷೇಧಿಸಿ ಹೊರಡಿಸಿದ್ದ ಆದೇಶಕ್ಕೆ ಈ ಹಿಂದೆ ಮದ್ರಾಸ್ ಹೈಕೋರ್ಟ್ ತಾತ್ಕಾಲಿಕ ತಡೆಯಾಜ್ಞೆ ನೀಡಿತ್ತು. ಈ ಆದೇಶವನ್ನೇ ಎತ್ತಿ ಹಿಡಿದಿರುವ ಸುಪ್ರೀಂಕೋರ್ಟ್ ಇದು ಆದೇಶ ದೇಶಾದ್ಯಂತ ಅನ್ವಯಿಸಲಿದೆ ಎಂದು ಹೇಳಿದೆ. 

ಮದ್ರಾಸ್ ಹೈಕೋರ್ಟ್ ನ ಮಧುರೈ ಪೀಠ, ಗೋಹತ್ಯೆ ನಿಷೇಧ ಆದೇಶಕ್ಕೆ ನಾಲ್ಕು ವಾರಗಳ ಕಾಲ ತಡೆಯಾಜ್ಞೆ ವಿಧಿಸಿತ್ತು. ಅಲ್ಲದೆ ಈ ಕುರಿತು ಪ್ರತಿಕ್ರಿಯೆ ನೀಡುವಂತೆ ಕೇಂದ್ರ ಮತ್ತು ತಮಿಳುನಾಡು ಸರ್ಕಾರಕ್ಕೆ ನೋಟಿಸ್ ನೀಡಿತ್ತು. ಆಹಾರ ಮನುಷ್ಯರ ಮೂಲ ಹಕ್ಕಾಗಿದ್ದು, ಇದರಲ್ಲಿ ಮಧ್ಯಪ್ರವೇಶಿಸುವುದು ಬೇಡ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿತ್ತು.
ಗೋ ಹತ್ಯೆ ನಿಷೇಧ ಕಾಯ್ದೆ ತಿದ್ದುಪಡಿ ಮಸೂದೆಯ ಅಧಿಸೂಚನೆಯಲ್ಲಿ ಗೋವನ್ನು ಖರೀದಿಸಿ ಆರು ತಿಂಗಳು ಮಾರುವಂತಿಲ್ಲ. ಕೃಷಿ ಚಟುವಟಿಕೆಗೆ ಮಾತ್ರ ಗೋವನ್ನು ಖರೀದಿಸಬೇಕು. ಬೇರೆಯವರು ಗೋವನ್ನು ಕೊಳ್ಳಬೇಕಾದರೆ ಸರ್ಕಾರದ ಅನುಮತಿ ಪಡೆಯಬೇಕು. ರೋಗ ಅಥವಾ ವಯಸ್ಕ ಗೋವುಗಳನ್ನು ಕಸಾಯಿ ಖಾನೆಗೆ ಕಳುಹಿಸುವಂತಿಲ್ಲ. ಗೋ ಹತ್ಯೆ ಮಾಡಿದವರಿಗೆ 7 ವರ್ಷ ಜೈಲು 1 ಲಕ್ಷ ರುಪಾಯಿ ದಂಡ ವಿಧಿಸಬಹುದು ಎಂದು ಕೇಂದ್ರ ಸರ್ಕಾರ ಹೇಳಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com