ಅಮರನಾಥ ಯಾತ್ರೆಗೆ ಉಗ್ರರ ದಾಳಿ: ಉಗ್ರರಿಗೆ ಎಂದಿಗೂ ತಲೆ ಬಾಗಲ್ಲ- ಪ್ರಧಾನಿ ಮೋದಿ

ಅಮರನಾಥ ಯಾತ್ರೆ ಮೇಲಿನ ಉಗ್ರರು ದಾಳಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ತೀವ್ರ ಖಂಡನೆ ವ್ಯಕ್ತಪಡಿಸಿದ್ದು, ಇಂತಹ ಹೇಯ ಕೃತ್ಯಕ್ಕೆ ಭಾರತ ಎಂದಿಗೂ ತಲೆ ಬಾಗುವುದಿಲ್ಲ ಎಂದು ಸೋಮವಾರ ಹೇಳಿದ್ದಾರೆ...
ಪ್ರಧಾನಮಂತ್ರಿ ನರೇಂದ್ರ ಮೋದಿ
ಪ್ರಧಾನಮಂತ್ರಿ ನರೇಂದ್ರ ಮೋದಿ
ನವದೆಹಲಿ: ಅಮರನಾಥ ಯಾತ್ರೆ ಮೇಲಿನ ಉಗ್ರರು ದಾಳಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ತೀವ್ರ ಖಂಡನೆ ವ್ಯಕ್ತಪಡಿಸಿದ್ದು, ಇಂತಹ ಹೇಯ ಕೃತ್ಯಕ್ಕೆ ಭಾರತ ಎಂದಿಗೂ ತಲೆ ಬಾಗುವುದಿಲ್ಲ ಎಂದು ಸೋಮವಾರ ಹೇಳಿದ್ದಾರೆ. 
ದಾಳಿ ಕುರಿತಂತೆ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ತೀವ್ರ ಖಂಡನೆ ವ್ಯಕ್ತಪಡಿಸಿರುವ ಅವರು, ಅಮರನಾಥ ಯಾತ್ರೆ ಮೇಲಿನ ಉಗ್ರರು ನಡೆಸಿದ್ದರಿಂದ ಆಗಿರುವ ದುಃಖ ವಾಕ್ಯಕ್ಕೂ ನಿಲುಕದ್ದು. ಈ ದಾಳಿಯನ್ನು ಎಲ್ಲರೂ ಕಟುವಾಗಿ ಖಂಡಿಸಬೇಕು. ಇಂತಹ ಹೇಯ ಕೃತ್ಯಕ್ಕೆ ಭಾರತ ಎಂದಿಗೂ ತಲೆಬಾಗುವುದಿಲ್ಲ ಎಂದು ಹೇಳಿದ್ದಾರೆ. 
ಉಗ್ರ ದಾಳಿಗೆ ತಮ್ಮ ಪ್ರೀತಿ ಪಾತ್ರರನ್ನು ಕಳೆದುಕೊಂಡವರ ಬಗ್ಗೆ ದುಃಖವಾಗುತ್ತಿದೆ. ಗಾಯಾಳುಗಳು ಶೀಘ್ರಗತಿಯಲ್ಲಿ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆಂದು ಹೇಳಿದ್ದಾರೆ. 
ದಾಳಿಗೆ ಕೇಂದ್ರ ಗೃಹ ಸಚಿವ ರಾಜನಾಥ ಸಿಂಗ್, ರಕ್ಷಣಾ ಸಚಿವ ಅರುಣ್ ಜೇಟ್ಲಿ, ರಾಷ್ಟ್ರಪತಿ ಪ್ರಣಬ್ ಮುಖರ್ಜಿ ತೀವ್ರ ಖಂಡನೆ ವ್ಯಕ್ತಪಡಿಸಿದ್ದು, ಉಗ್ರವಾದದ ವಿರುದ್ದ ಭಾರತದ ಹೋರಾಟ ಮತ್ತಷ್ಟು ತೀವ್ರಗೊಳ್ಳಲಿದೆ ಎಂದು ಹೇಳಿದ್ದಾರೆ. 
ದಾಳಿ ಕುರಿತಂತೆ ಟ್ವಿಟರ್ ನಲ್ಲಿ ಪ್ರತಿಕ್ರಿಯೆ ನೀಡಿರುವ ರಾಷ್ಟ್ರಪತಿ ಪ್ರಣಬ್ ಮುರ್ಜಿಯವರು, ಜಮ್ಮು ಮತ್ತು ಕಾಶ್ಮೀರದ ಅಮರನಾಥ ಯಾತ್ರಾರ್ಥಿಗಳ ಮೇಲಿನ ದಾಳಿಯನ್ನು ಭಾರತ ತೀವ್ರವಾಗಿ ಖಂಡಿಸುತ್ತದೆ. ದಾಳಿಯಲ್ಲಿ ಮೃತಪಟ್ಟಿವರಿಗೆ ಸಂತಾಪ ಸೂಚಿಸುತ್ತೇನೆಂದು ಹೇಳಿದ್ದಾರೆ. 
ದಾಳಿ ಬಳಿಕ ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಜೊತೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ರಾಜನಾಥ ಸಿಂಗ್ ಅವರು ಮಾತುಕತೆ ನಡೆಸಿದ್ದು ಅಗತ್ಯ ಭದ್ರತೆ ನೆರವು ನೀಡುವುದಾಗಿ ತಿಳಿಸಿದ್ದಾರೆ. 
ದಾಳಿ ಬಳಿಕ ರಾಜಕೀಯ ಕೆಸರೆಚಾಟ ಕೂಡ ಆರಂಭವಾಗಿದ್ದು, ದಾಳಿಯೊಂದು ದೊಡ್ಡ ಭದ್ರತಾ ವೈಫಲ್ಯವಾಗಿದೆ. ಎಂದು ಪ್ರತಿಪಕ್ಷ ಮುಖಂಡರು ಆರೋಪಿಸಿದ್ದಾರೆ. ಘಟನೆಯ ಹೊಣೆಯನ್ನು ಕೇಂದ್ರ ಹೊರಬೇಕೆಂದು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಯವರು ಆಗ್ರಹಿಸಿದ್ದಾರೆ. ಇದರಂತೆ ದಾಳಿ ಖಂಡಿಸಿ ಜಮ್ಮು ಮತ್ತು ಕಾಶ್ಮೀರದಲ್ಲಿಂದು ಬಂದ್ ಗೆ ಕರೆ ನೀಡಲಾಗಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com