ಆಧಾರ್ ಗೆ ಸಂಬಂಧಿಸಿದ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ನ ಪಂಚ ಸದಸ್ಯ ಪೀಠ ಜು.18-19 ರಂದು ವಿಚಾರಣೆ ನಡೆಸಲಿದೆ ಎಂದು ನ್ಯಾ.ಜೆಎಸ್ ಖೇಹರ್, ನ್ಯಾ. ಡಿ.ವೈ ಚಂದ್ರಚೂಡ್ ನೇತೃತ್ವದ ಪೀಠ ಹೇಳಿದೆ. ಅಟಾರ್ನಿ ಜನರಲ್ ಕೆಕೆ ವೇಣುಗೋಪಾಲ್ ಹಾಗೂ ಆಧಾರ್ ನ್ನು ವಿವಿಧ ಯೋಜನೆಗಳಿಗೆ ಕಡ್ಡಾಯಗೊಳಿಸಿರುವುದನ್ನು ಪ್ರಶ್ನಿಸಿರುವ ಅರ್ಜಿದಾರರ ಪರ ವಕೀಲ ಅಡ್ವೊಕೇಟ್ ಶ್ಯಾಮ್ ದಿವಾನ್ ಅರ್ಜಿಗಳ ಶೀಘ್ರ ವಿಚಾರಣೆಗೆ ಮನವಿ ಮಾಡಿದ್ದರು.