ನವದೆಹಲಿ: ನಿನ್ನೆ ಎನ್ ಡಿಎ ರಾಷ್ಟ್ರಪತಿ ಅಭ್ಯರ್ಥಿ ರಾಮ್ ನಾಥ್ ಕೋವಿಂದ್ ಅವರಿಗೆ ಬೆಂಬಲ ನೀಡುವುದಾಗಿ ಹೇಳಿದ್ದ ಬಿಹಾರ ಮುಖ್ಯಮಂತ್ರಿ, ಜೆಡಿಯು ನಾಯಕ ನಿತೀಶ್ ಕುಮಾರ್ ಇಂದು ಉಪ ರಾಷ್ಟ್ರಪತಿ ಹುದ್ದೆಗೆ ಸ್ಪರ್ಧಿಸುತ್ತಿರುವ ಯುಪಿಎ ಅಭ್ಯರ್ಥಿ ಗೋಪಾಲ್ ಕೃಷ್ಣ ಗಾಂಧಿ ಅವರಿಗೆ ಬೆಂಬಲ ನೀಡುವುದಾಗಿ ಹೇಳಿದ್ದಾರೆ.