ನಾನು 'ಪ್ರಜೆಗಳ ಅಭ್ಯರ್ಥಿ': ವಿಪಕ್ಷಗಳ ಉಪ ರಾಷ್ಟ್ರಪತಿ ಅಭ್ಯರ್ಥಿ ಗೋಪಾಲಕೃಷ್ಣ ಗಾಂಧಿ!

ಮಾಜಿ ಪಶ್ಚಿಮ ಬಂಗಾಳ ರಾಜ್ಯಪಾಲ ಗೋಪಾಲಕೃಷ್ಣ ಗಾಂಧಿ ಅವರನ್ನು ಉಪರಾಷ್ಟ್ರಪತಿ ಅಭ್ಯರ್ಥಿಯಾಗಿ ವಿಪಕ್ಷಗಳು ಘೋಷಿಸಿದ್ದು ಇದಕ್ಕೆ ಸಂತಸ ವ್ಯಕ್ತಪಡಿಸಿರುವ...
ಗೋಪಾಲಕೃಷ್ಣ ಗಾಂಧಿ
ಗೋಪಾಲಕೃಷ್ಣ ಗಾಂಧಿ
Updated on
ಚೆನ್ನೈ: ಮಾಜಿ ಪಶ್ಚಿಮ ಬಂಗಾಳ ರಾಜ್ಯಪಾಲ ಗೋಪಾಲಕೃಷ್ಣ ಗಾಂಧಿ ಅವರನ್ನು ಉಪರಾಷ್ಟ್ರಪತಿ ಅಭ್ಯರ್ಥಿಯಾಗಿ ವಿಪಕ್ಷಗಳು ಘೋಷಿಸಿದ್ದು ಇದಕ್ಕೆ ಸಂತಸ ವ್ಯಕ್ತಪಡಿಸಿರುವ ಗೋಪಾಲಕೃಷ್ಣ ಗಾಂಧಿ ಅವರು ನಾನು ಪ್ರಜೆಗಳ ಅಭ್ಯರ್ಥಿ ಎಂದು ಹೇಳಿದ್ದಾರೆ. 
ನನ್ನ ಬಗ್ಗೆ ಹೆಚ್ಚಾಗಿ ನಾನು ಮಾತನಾಡಲು ಇಚ್ಚಿಸುವುದಿಲ್ಲ. ಆದರೆ ಸದ್ಯಕ್ಕೆ ದೇಶವು 'ಮಿನಿ ಬಿಕ್ಕಟ್ಟು' ಯಿಂದ ಬಳಲುತ್ತಿದೆ ಎಂದು ರಾಷ್ಟ್ರಪಿತ ಮಹಾತ್ಮಾ ಗಾಂಧಿ ಅವರ ಮೊಮ್ಮಗ ಗೋಪಾಲಕೃಷ್ಣ ಗಾಂಧಿ ಅವರು ಹೇಳಿದ್ದಾರೆ. 
ದೇಶವನ್ನು ಭಯೋತ್ಪಾದನೆ ಎಂಬ ಭೂತವು ಬಿಡದಂತೆ ಕಾಡುತ್ತಿದೆ. ಇದರಿಂದ ಜನರು ಆತಂಕದಿಂದ ಬದುಕುವಂತಾಗಿದೆ. ಇಂತಹ ಪರಿಸ್ಥಿತಿ ಬದಲಾಗಬೇಕು. ಈಗಿರುವಾಗ ನನ್ನ ಬಗ್ಗೆ ನಾನು ಹೆಚ್ಚಿಗೆ ಏನು ಮಾತನಾಡಲು ಸಾಧ್ಯವಿಲ್ಲ. ನನ್ನನ್ನು ಉಪರಾಷ್ಟ್ರಪತಿ ಅಭ್ಯರ್ಥಿಯಾಗಿ 18 ಪಕ್ಷಗಳು ಒಮ್ಮತದಿಂದ ಆಯ್ಕೆ ಮಾಡಿರುವುದು ಸಂತಸ ತಂದಿದೆ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com