ಪ್ರಧಾನಿ ಮೋದಿ ನೀತಿಯಿಂದ ಕಾಶ್ಮೀರದಲ್ಲಿ ಉಗ್ರರಿಗೆ ಅವಕಾಶ ಸೃಷ್ಟಿ: ರಾಹುಲ್ ಗಾಂಧಿ
ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಅಲ್ಪಾವಧಿ ರಾಜಕೀಯ ಲಾಭದ ದುರಾಸೆಗಾಗಿ ಅವರು ರೂಪಿಸುತ್ತಿರುವ ನೀತಿಗಳು, ಕಾಶ್ಮೀರದಲ್ಲಿ ಭಯೋತ್ಪಾದಕರಿಗೆ ಅವಕಾಶ ಸೃಷ್ಟಿಸುತ್ತಿದೆ ಎಂದು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಯವರು ಗಂಭೀರವಾದ ಆರೋಪ ಮಾಡಿದ್ದಾರೆ...

Published On :
ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಅಲ್ಪಾವಧಿ ರಾಜಕೀಯ ಲಾಭದ ದುರಾಸೆಗಾಗಿ ಅವರು ರೂಪಿಸುತ್ತಿರುವ ನೀತಿಗಳು, ಕಾಶ್ಮೀರದಲ್ಲಿ ಭಯೋತ್ಪಾದಕರಿಗೆ ಅವಕಾಶ ಸೃಷ್ಟಿಸುತ್ತಿದೆ ಎಂದು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಯವರು ಗಂಭೀರವಾದ ಆರೋಪ ಮಾಡಿದ್ದಾರೆ.
ಅಮನರನಾಥ ಯಾತ್ರಾರ್ಥಿಗಳ ಮೇಲಿನ ಉಗ್ರರ ದಾಳಿ ಕುರಿತಂತೆ ಸಾಮಾಜಿತ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಅವರು, ಮೋದಿ ವೈಯಕ್ತಿಕ ಲಾಭ= ಭಾರತದ ವ್ಯೂಹಾತ್ಮಕ ನಷ್ಟ+ ಅಮಾಯಕರ ಭಾರತೀಯರ ಬಲಿದಾನ ಎಂಬ ವ್ಯಾಖ್ಯಾನವನ್ನು ನೀಡಿದ್ದಾರೆ.
ಇದೇ ವೇಳೆ ಜಮ್ಮು ಮತ್ತು ಕಾಶ್ಮೀರದಲ್ಲಿ ಬಿಜೆಪಿ, ಪಿಡಿಪಿಯೊಂದಿಗಿನ ಮೈತ್ರಿ ಸರ್ಕಾರ ನಡೆಸುತ್ತಿರುವುದನ್ನೂ ರಾಹುಲ್ ಟೀಕಿಸಿದ್ದಾರೆ. ಬಿಜೆಪಿ-ಪಿಡಿಪಿ ಮೈತ್ರಿಗೆ ಭಾರತ ದೊಡ್ಡ ಬೆಲೆ ತೆರಬೇಕಾಗಿದೆ. ಪ್ರಧಾನಿಯವರ ವೈಯಕ್ತಿಕ ಲಾಭಕ್ಕಾಗಿ, ಅಮಾಯಕರ ಭಾರತೀಯರ ರಕ್ತ ಹರಿದಿದೆ. ಅಲ್ಲದೆ ಭಾರತಕ್ಕೆ ತಂತ್ರಗಾರಿಕೆಯ ನಷ್ಟವಾಗಿದೆ. ಭಾರತ ಯಾವತ್ತೂ ಭಯೋತ್ಪಾದಕರಿಗೆ ಬೆದರುವುದಿಲ್ಲ ಎಂದು ರಾಹುಲ್ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


