ಅರುಣಾಚಲ ಪ್ರದೇಶ: ಭೂಕುಸಿತದಲ್ಲಿ ಮೃತಪಟ್ಟವರಿಗೆ 10 ಲಕ್ಷ ಪರಿಹಾರ ಘೋಷಣೆ

ಅರುಣಾಚಲ ಪ್ರದೇಶದಲ್ಲಿ ಎಡಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಪ್ರವಾಹ ಸ್ಥಿತಿ ನಿರ್ಮಾಣವಾಗಿದ್ದು ಭೂಕುಸಿತ...
ಕಿರಣ್ ರಿಜಿಜು
ಕಿರಣ್ ರಿಜಿಜು
Updated on: 
ಪಪುಮ್ ಪರೇ(ಅರುಣಾಚಲ ಪ್ರದೇಶ): ಅರುಣಾಚಲ ಪ್ರದೇಶದಲ್ಲಿ ಎಡಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಪ್ರವಾಹ ಸ್ಥಿತಿ ನಿರ್ಮಾಣವಾಗಿದ್ದು ಭೂಕುಸಿತ ಸಂಭವಿಸಿದೆ. ಇದರಲ್ಲಿ ಕನಿಷ್ಠ 14 ಮಂದಿ ಸಾವನ್ನಪ್ಪಿದ್ದು ಮೃತರಿಗೆ 10 ಲಕ್ಷ ಪರಿಹಾರವನ್ನು ಕೇಂದ್ರ ಸಚಿವ ಕಿರಣ್ ರಿಜಿಜು ಅವರು ಘೋಷಿಸಿದ್ದಾರೆ. 
ಪ್ರವಾಹದಲ್ಲಿ ಮೃತಪಟ್ಟವರ ಮನೆಗಳಿಗೆ ಭೇಟಿ ನೀಡಿದ ಕಿರಣ್ ರಿಜಿಜು ಅವರು ಸಾಂತ್ವನ ಹೇಳಿದರು. ಜತೆಗೆ ಕಡಿತಗೊಂಡಿರುವ ರಸ್ತೆಗಳನ್ನು ತಿಂಗಳೊಳಗೆ ಸರಿಪಡಿಸುವಂತೆ ಜಿಲ್ಲಾಡಳಿತಕ್ಕೆ ಸೂಚಿಸಿದ್ದಾರೆ. 
ಎಡಬಿಡದೇ ಸುರಿದ ಮಳೆಯಿಂದಾಗಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿತ್ತು. ಇನ್ನು ಅಲ್ಲಲ್ಲಿ ಭೂಕುಸಿತ ಸಂಭವಿಸಿದ್ದು ಜುಲೈ 11ರಂದು ಸಂಭವಿಸಿದ ಭೂಕುಸಿತದಲ್ಲಿ 14 ಮಂದಿ ಸಾವನ್ನಪ್ಪಿದ್ದರು. 
ಕೇಂದ್ರ ಗೃಹ ಇಲಾಖೆ ರಾಜ್ಯ ಸಚಿವ ಕಿರಣ್ ರಿಜಿಜು ಅವರು ನಿನ್ನೆ ಟ್ವೀಟ್ ಮಾಡಿ, ಅರುಣಾಚಲ ಪ್ರದೇಶ, ಮಿಜೋರಾಂ ಮತ್ತು ಇತರ ರಾಜ್ಯಗಳಲ್ಲಿನ ನೆರೆ ಪ್ರವಾಹ ಕುರಿತು ಗೃಹ ಸಚಿವಾಲಯ ನಿಗಾ ವಹಿಸುತ್ತಿದ್ದು ಕೇಂದ್ರ ಸರ್ಕಾರ ಅಗತ್ಯ ನೆರವು ಒದಗಿಸಲಿದೆ. ಕೇಂದ್ರ ಸರ್ಕಾರ ಈ ರಾಜ್ಯಗಳ ಜೊತೆ ನಿರಂತರ ಸಂಪರ್ಕದಲ್ಲಿರುತ್ತದೆ ಎಂದು ಭರವಸೆ ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com