ವೈದ್ಯಕೀಯ ಪ್ರವೇಶ: ತಮಿಳುನಾಡು ವಿದ್ಯಾರ್ಥಿಗಳಿಗೆ 85% ಮೀಸಲಾತಿ ರದ್ದುಪಡಿಸಿದ ಮದ್ರಾಸ್ ಹೈಕೋರ್ಟ್

ವೈದ್ಯಕೀಯ ಪ್ರವೇಶ ಪರೀಕ್ಷೆಯಲ್ಲಿ ತಮಿಳುನಾಡು ರಾಜ್ಯ ಮಂಡಳಿಯ ವಿದ್ಯಾರ್ಥಿಗಳಿಗೆ ನಿಗದಿಪಡಿಸಲಾಗಿದ್ದ ಶೇ.85ರಷ್ಟು....
ಮದ್ರಾಸ್ ಹೈಕೋರ್ಟ್
ಮದ್ರಾಸ್ ಹೈಕೋರ್ಟ್
ಚೆನ್ನೈ: ವೈದ್ಯಕೀಯ ಪ್ರವೇಶ ಪರೀಕ್ಷೆಯಲ್ಲಿ ತಮಿಳುನಾಡು ರಾಜ್ಯ ಮಂಡಳಿಯ ವಿದ್ಯಾರ್ಥಿಗಳಿಗೆ ನಿಗದಿಪಡಿಸಲಾಗಿದ್ದ ಶೇ.85ರಷ್ಟು ಮೀಸಲಾತಿಯನ್ನು ಶುಕ್ರವಾರ ಮದ್ರಾಸ್ ಹೈಕೋರ್ಟ್ ರದ್ದುಗೊಳಿಸಿದ್ದು, ಇದರಿಂದ ತಮಿಳುನಾಡು ವಿದ್ಯಾರ್ಥಿಗಳಿಗೆ ಭಾರಿ ಹಿನ್ನಡೆಯಾಗಿದೆ.
ತಮಿಳುನಾಡು ಸರ್ಕಾರ ಕಳೆದ ಜೂನ್ 22ರಂದು ರಾಜ್ಯ ಮಂಡಳಿಯ ವಿದ್ಯಾರ್ಥಿಗಳಿಗೆ ಶೇ.85ರಷ್ಟು ಮೀಸಲಾತಿ ನಿಗದಿಪಡಿಸಿ ಆದೇಶ ಹೊರಡಿಸಿತ್ತು. ನೀಟ್ ಪರೀಕ್ಷೆಯ ಅಂಕಗಳ ಆಧಾರದ ಮೇಲೆ ವೈದ್ಯಕೀಯ ಕೋರ್ಸ್ ಗೆ ಪ್ರವೇಶ ನೀಡಬೇಕು ಎಂದು ಸುಪ್ರೀ ಕೋರ್ಟ್ ಆದೇಶ ನೀಡಿದ ಹಿನ್ನೆಲೆಯಲ್ಲಿ ಎಲ್ಲಾ ಸೀಟ್ ಗಳು ಸಿಬಿಎಸ್ ಇ ವಿದ್ಯಾರ್ಥಿಗಳ ಪಾಲಾಗುವ ಆತಂಕದಿಂದ ತಮಿಳುನಾಡು ಸರ್ಕಾರ ಈ ಆದೇಶ ಹೊರಡಿಸಿತ್ತು.
ಶೇ.85ರಷ್ಟು ತಮಿಳುನಾಡು ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯ ವಿದ್ಯಾರ್ಥಿಗಳಿಗೆ ಹಾಗೂ ಶೇ.15ರಷ್ಟು ಸಿಬಿಎಸ್ ಇ ಸೇರಿದಂತೆ ಇತರೆ ಮಂಡಳಿ ವಿದ್ಯಾರ್ಥಿಗಳಿಗೆ ತಮಿಳುನಾಡು ಸರ್ಕಾರ ಮೀಸಲಾತಿಯನ್ನು ನಿಗದಿಪಡಿಸಿತ್ತು. ಆದರೆ ರಾಜ್ಯ ಸರ್ಕಾರದ ಮೀಸಲಾತಿ ಆದೇಶ ಭಾರತೀಯ ವೈದ್ಯಕೀಯ ಮಂಡಳಿಯ ನಿಯಮವನ್ನು ಉಲ್ಲಂಘಿಸಿದೆ ಎಂದು ನ್ಯಾಯಮೂರ್ತಿ ಕೆ ರವಿಚಂದ್ರನ್ ಬಾಬು ಅವರು ಅದನ್ನು ರದ್ದುಗೊಳಿಸಿದ್ದಾರೆ. ಅಲ್ಲದೆ ಹೊಸ ಅರ್ಹತಾ ಪಟ್ಟಿ ಸಿದ್ಧಪಡಿಸಿ ಕೌನ್ಸಿಲಿಂಗ್ ನಡೆಸುವಂತೆ ಸೂಚಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com