ಮೃತ ಉಗ್ರನ ದೇಹದ ಮೇಲೆ ಇಸ್ಲಾಮಿಕ್ ಸ್ಟೇಟ್ ಬಾವುಟ ಹೊದಿಕೆ: ಆತಂಕ ಸೃಷ್ಠಿ

Published On :
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರನೊರ್ವನ ಅಂತ್ಯಕ್ರಿಯೆಯ ವೇಳೆ ಆತನ ದೇಹದ ಮೇಲೆ ಇಸ್ಲಾಮಿಕ್ ಸ್ಟೇಟ್ ಸಂಘಟನೆಯ ಬಾವುಟವನ್ನು ಹೊದಿಸಿರುವುದು ಆತಂಕಕ್ಕೆ ಎಡೆ ಮಾಡಿ ಕೊಟ್ಟಿದೆ.
ಜಗತ್ತಿನಾದ್ಯಂತ ವಿದ್ವಾಂಸಕ ಕೃತ್ಯಗಳ ಮೂಲಕ ನರಮೇದ ನಡೆಸುತ್ತಿರುವ ಇಸ್ಲಾಮಿಕ್ ಸ್ಟೇಟ್ ಉಗ್ರ ಸಂಘಟನೆ ಭಾರತದಲ್ಲಿ ತನ್ನ ಕಂದಬ ಭಾವುವನ್ನು ಚಾಚಲು ಅವಣಿಸುತ್ತಿದ್ದು ಈ ಮಧ್ಯೆ ಹಿಜ್ಬುಲ್ ಮುಜಾಯಿದ್ದೀನ್ ಉಗ್ರ ಸಂಘಟನೆಗೆ ಸೇರಿದ ಉಗ್ರನೊರ್ವನ ಅಂತ್ಯಕ್ರಿಯೆಯಲ್ಲಿ ಕಾಶ್ಮೀರದ ನೂರಾರು ಯುವಕರು ಭಾಗಿಯಾಗಿರುವುದು ಇಸ್ಲಾಮಿಕ್ ಸ್ಟೇಟ್ ಉಗ್ರ ಸಂಘಟನೆಯ ಬಾವುಟಗಳನ್ನು ಪ್ರದರ್ಶಿಸಿದ್ದಾರೆ ಎಂದು ಟ್ರೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.
ಇತ್ತೀಚೆಗಷ್ಟೇ ಭಾರತೀಯ ಸೇನೆ ಹಿಜ್ಬುಲ್ ಮುಜಾಯಿದ್ದಿನ್ ಸಂಘಟನೆಯ ಮೂವರು ಉಗ್ರರನ್ನು ಹತ್ಯೆಗೈದಿದ್ದರು. ಇವರ ಪೈಕಿ ಶ್ರೀನಗರ ನಿವಾಸಿ ಸಾಜದ್ ಗಿಲ್ಕರ್ ನ ಅಂತ್ಯಕ್ರಿಯೆಯನ್ನು ಶ್ರೀನಗರದಲ್ಲಿ ನಡೆಸಲಾಯಿತು. ಈ ವೇಳೆ ಆತನ ದೇಹದ ಮೇಲೆ ಪಾಕಿಸ್ತಾನದ ಬಾವುಟವನ್ನು ಹೊದಿಸಲಾಗಿತ್ತು ಎಂದು ವರದಿಯಾಗಿದೆ.
ಜೂನ್ 22ರಂದು ಜಮ್ಮು ಮತ್ತು ಕಾಶ್ಮೀರದ ಡಿಎಸ್ಪಿ ಮೊಹಮ್ಮದ್ ಆಯೂಬ್ ಪಂಡಿತ್ ಎಂಬುವರನ್ನು ಜಾಮಿಯಾ ಮದೀಸಿ ಮುಂದೆ ಉದ್ರಿಕ್ತರ ಗುಂಪು ದೊಣ್ಣೆ ಮತ್ತು ಕಲ್ಲುಗಳಿಂದ ಹೊಡೆದು ಹತ್ಯೆಗೈದಿದ್ದರು. ಇದಕ್ಕೆ ಪ್ರಚೋದನೆ ನೀಡಿದ್ದ ಹಿಜ್ಬುಲ್ ಮುಜಾಯಿದ್ದೀನ್ ಮೂವರು ಉಗ್ರರನ್ನು ಭಾರತೀಯ ಸೇನೆ ಹತ್ಯೆಗೈದಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


