ಜಮ್ಮು: ಪಾಕಿಸ್ತಾನ ಸೇನೆ ಶನಿವಾರ ಮತ್ತೆ ಕದನ ವಿರಾಮ ಉಲ್ಲಂಘಿಸಿ ಅಪ್ರಚೋದಿತ ಗುಂಡಿನ ದಾಳಿ ನಡೆಸಿದ್ದು, ದಾಳಿಯಲ್ಲಿ ಓರ್ವ ಭಾರತೀಯ ಯೋಧ ಹುತಾತ್ಮರಾಗಿರುವುದಾಗಿ ರಕ್ಷಣಾ ವಕ್ತಾರರು ತಿಳಿಸಿದ್ದಾರೆ.
ಜಮ್ಮು ಕಾಶ್ಮೀರದ ರಾಜೋರಿ ಸೆಕ್ಟರ್ ನ ಗಡಿ ನಿಯಂತ್ರಣ ರೇಖೆ ಬಳಿ ಪಾಕ್ ಸೇನೆ ನಡೆಸಿದ ಗುಂಡಿನ ದಾಳಿಯಲ್ಲಿ ಕಾಶ್ಮೀರದ ಪೂಂಚ್ ಜಿಲ್ಲೆಯ ಲ್ಯಾನ್ಸ್ ನಾಯಕ್ ಮೊಹಮ್ಮದ್ ನಾಸೀರ್ ಅವರು ಹುತಾತ್ಮರಾಗಿದ್ದಾರೆ ಎಂದು ವಕ್ತಾರರು ಹೇಳಿದ್ದಾರೆ.
ಇಂದು ಮಧ್ಯಾಹ್ನ 1.30ರ ಸುಮಾರಿಗೆ ಪಾಕ್ ಪಡೆಗಳು ಅಪ್ರಚೋದಿತ ಗುಂಡಿನ ದಾಳಿ ನಡೆಸಿದ್ದು, ಅದಕ್ಕೆ ಭಾರತೀಯ ಸೇನೆ ತಕ್ಕ ಪ್ರತ್ಯುತ್ತರ ನೀಡಿದೆ ಎಂದು ಅವರು ತಿಳಿಸಿದ್ದಾರೆ.
ಜುಲೈ 12ರಂದು ಉತ್ತರ ಕಾಶ್ಮೀರದ ಕೆರನ್ ಸೆಕ್ಟರ್ ನಲ್ಲಿ ಪಾಕ್ ಸೇನೆ ನಡೆಸಿದ ಗುಂಡಿನ ದಾಳಿಯಲ್ಲಿ ಇಬ್ಬರು ಭಾರತೀಯ ಯೋಧರು ಹುತಾತ್ಮರಾಗಿದ್ದರು.