ಕಾಶ್ಮೀರದಲ್ಲಿ ಮುಂದುವರೆದ ಉದ್ವಿಗ್ನ ಪರಿಸ್ಥಿತಿ: ರಾಜನಾಥ ಸಿಂಗ್ ಭೇಟಿಯಾದ ಸಿಎಂ ಮೆಹಬೂಬಾ ಮುಫ್ತಿ

ಜಮ್ಮು ಮತ್ತು ಕಾಶ್ಮೀರದಲ್ಲಿ ಉದ್ವಿಗ್ನ ಪರಿಸ್ಥಿತಿ ಮುಂದುವರೆದ ಹಿನ್ನಲೆಯಲ್ಲಿ ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿಯವರು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರನ್ನು ಶನಿವಾರ ಭೇಟಿ ಮಾಡಿ ಮಾತುಕತೆ...
ರಾಜನಾಥ ಸಿಂಗ್ ಭೇಟಿಯಾದ ಸಿಎಂ ಮೆಹಬೂಬಾ ಮುಫ್ತಿ
ರಾಜನಾಥ ಸಿಂಗ್ ಭೇಟಿಯಾದ ಸಿಎಂ ಮೆಹಬೂಬಾ ಮುಫ್ತಿ
Updated on: 
ನವದೆಹಲಿ: ಜಮ್ಮು ಮತ್ತು ಕಾಶ್ಮೀರದಲ್ಲಿ ಉದ್ವಿಗ್ನ ಪರಿಸ್ಥಿತಿ ಮುಂದುವರೆದ ಹಿನ್ನಲೆಯಲ್ಲಿ ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿಯವರು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರನ್ನು ಶನಿವಾರ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. 
ರಾಜಧಾನಿ ದೆಹಲಿಯಲ್ಲಿರುವ ಮೆಹಬೂಬಾ ಮುಫ್ತಿಯವರು ರಾಜನಾಥ್ ಸಿಂಗ್ ಅವರನ್ನು ಇಂದು ಬೆಳಿಗ್ಗೆ ಭೇಟಿ ಮಾಡಿದ್ದು, ಕಾಶ್ಮೀರ ಪರಿಸ್ಥಿತಿ ಕುರಿತಂತೆ ಮಾತುಕತೆ ನಡೆಸಿದ್ದಾರೆಂದು ತಿಳಿದುಬಂದಿದೆ. 
ಜು.10 ರಾತ್ರಿ 8.20 ಸುಮಾರಿಗೆ ಉಗ್ರರ ಗುಂಪೊಂದು ಅಮರನಾಥ ಯಾತ್ರಾರ್ಥಿಗಳಿದ್ದ ಬಸ್ ಮೇಲೆ ದಾಳಿ ನಡೆಸಿತ್ತು. ಬ್ಯಾಟೆಂಗೂ ಹಾಗೂ  ಖಾನಾಬಾಲ್ ಗಳಲ್ಲಿ ಶಸ್ತ್ರಸಜ್ಜಿದ ಭಯೋತ್ಪಾದಕರ ಗುಂಪು ಪೊಲೀಸ್ ಬೆಂಗಾವಲು ಪಡೆಯ ಮೇಲೆ ದಾಳಿ ನಡೆಸಿತ್ತು, ಈ ವೇಳೆ ನಡೆದ ಗುಂಡಿನ ದಾಳಿಯಲ್ಲಿ ಯಾತ್ರಾರ್ಥಿಗಳಿದ್ದ ಬಸ್ ಸಿಲುಕಿಕೊಂಡಿತ್ತು. ಉಗ್ರರು ಮನೋಇಚ್ಛೆ ನಡೆಸಿದ್ದ ಗುಂಡಿನ ದಾಳಿಗೆ 7 ಯಾತ್ರಿಗಳು ಸಾವನ್ನಪ್ಪಿದ್ದರು. ಅಲ್ಲದೆ, 32ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿತ್ತು. ಯಾತ್ರಾರ್ಥಿಗಳ ಮೇಲಿನ ಉಗ್ರರ ದಾಳಿಯಿಂದಾಗಿ ಇಡೀ ದೇಶವೇ ಬೆಚ್ಚಿಬೀಳುವಂತಾಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com