ರಾಜೀನಾಮೆ ನೀಡುವಂತೆ ನಿತೀಶ್ ಕುಮಾರ್ ಕೇಳಿಲ್ಲವಾದರೂ, ತೇಜಸ್ವಿ ಯಾದವ್ ಭ್ರಷ್ಟಾಚಾರದ ಆರೋಪದಿಂದ ಮುಕ್ತರಾಗಿ ಹೊರಬರಬೇಕು ಎಂದು ಜೆಡಿಯು ಸಂದೇಶ ರವಾನೆ ಮಾಡಿದೆ ಎಂದು ಕೆಸಿ ತ್ಯಾಗಿ ತಿಳಿಸಿದ್ದಾರೆ. ಭ್ರಷ್ಟಾಚಾರದ ಪ್ರಕರಣಕ್ಕೆ ಸಂಬಂಧಿಸಿದಂತೆ ತೇಜಸ್ವಿ ಯಾದವ್ ಹೆಸರು ಎಫ್ಐಆರ್ ನಲ್ಲಿ ದಾಖಲಾಗಿದ್ದು, ವಿಪಕ್ಷಗಳಿಂದ ರಾಜೀನಾಮೆ ಒತ್ತಡ ಹೆಚ್ಚುತ್ತಿದೆ. ಈ ಬೆನ್ನಲ್ಲೇ ಸ್ಪಷ್ಟನೆ ನೀಡಿದ್ದ ಆರ್ ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಸಚಿವ, ಉಪಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದಿಲ್ಲ ಎಂದು ಹೇಳಿದ್ದರು.