ಸಂಸತ್ ಮುಂಗಾರು ಅಧಿವೇಶನ: ಎಲ್ಲಾ ವಿಷಯಗಳ ಚರ್ಚೆಗೆ ಸರ್ಕಾರ ಸಿದ್ಧವಿದೆ- ನಖ್ವಿ

ಸಂಸತ್ತಿನಲ್ಲಿ ಆರಂಭವಾಗಲಿರುವ ಮುಂಗಾರು ಅಧಿವೇಶನದಲ್ಲಿ ವಿಪಕ್ಷಗಳು ಪ್ರಸ್ತಾಪಿಸುವ ಪ್ರತೀ ವಿಷಯಗಳ ಕುರಿತಂತೆ ಚರ್ಚೆ ನಡೆಸಲು ಕೇಂದ್ರ ಸರ್ಕಾರ ಸಿದ್ಧವಿದೆ ಎಂದು ಸಂಸದೀಯ ವ್ಯವಹಾರಗಳ ರಾಜ್ಯ ಸಚಿವ ಮುಖ್ತಾರ್ ಅಬ್ಬಾಸ್...
ಸಂಸದೀಯ ವ್ಯವಹಾರಗಳ ರಾಜ್ಯ ಸಚಿವ ಮುಖ್ತಾರ್ ಅಬ್ಬಾಸ್ ನಖ್ವಿ
ಸಂಸದೀಯ ವ್ಯವಹಾರಗಳ ರಾಜ್ಯ ಸಚಿವ ಮುಖ್ತಾರ್ ಅಬ್ಬಾಸ್ ನಖ್ವಿ
ನವದೆಹಲಿ: ಸಂಸತ್ತಿನಲ್ಲಿ ಆರಂಭವಾಗಲಿರುವ ಮುಂಗಾರು ಅಧಿವೇಶನದಲ್ಲಿ ವಿಪಕ್ಷಗಳು ಪ್ರಸ್ತಾಪಿಸುವ ಪ್ರತೀ ವಿಷಯಗಳ ಕುರಿತಂತೆ ಚರ್ಚೆ ನಡೆಸಲು ಕೇಂದ್ರ ಸರ್ಕಾರ ಸಿದ್ಧವಿದೆ ಎಂದು ಸಂಸದೀಯ ವ್ಯವಹಾರಗಳ ರಾಜ್ಯ ಸಚಿವ ಮುಖ್ತಾರ್ ಅಬ್ಬಾಸ್ ನಖ್ವಿಯವರು ಭಾನುವಾರ ಹೇಳಿದ್ದಾರೆ. 
ಈ ಕುರಿತಂತೆ ಮಾತನಾಡಿರುವ ಅವರು, ಸಂಸತ್ತಿನಲ್ಲಿ ಆರಂಭವಾಗುತ್ತಿರುವ ಮುಂಗಾರು ಅಧಿವೇಶನದಲ್ಲಿ ವಿರೋಧ ಪಕ್ಷಗಳು ಎತ್ತುವ ಪ್ರತೀ ವಿಷಯದ ಕುರಿತಂತೆಯೂ ಚರ್ಚೆ ನಡೆಸಲು ನಾವು ಸಿದ್ಧರಿದ್ದೇವೆ. ಈ ಬಾರಿ ನಡೆಯುವ ಅಧಿವೇಶನದಲ್ಲಿ ಹಲವಾರು ಪ್ರಮುಖ ಮಸೂದೆಗಳನ್ನು ಮಂಡನೆ ಮಾಡಲಾಗುತ್ತದೆ. ಮಸೂದೆ ಕುರಿತಂತೆಯೂ ಚರ್ಚೆ ನಡೆಸುತ್ತೇವೆಂದು ಹೇಳಿದ್ದಾರೆ. 
ಸಂಸತ್ತಿನಲ್ಲಿ ನಡೆಯಬೇಕಿರುವ ಕಲಾಪಗಳು ಸುಗಮವಾಗಿ ಸಾಗಬೇಕೆಂಬುದನ್ನು ನಾವು ಬಯಸುತ್ತೇವೆ. ನಿಯಮದಂತೆಯೇ ವಿರೋಧ ಪಕ್ಷಗಳ ಆಗ್ರಹಗಳಂತೆಯೇ ನಾವು ಚರ್ಚೆಗಳನ್ನು ನಡೆಸುತ್ತೇವೆಂದು ತಿಳಿಸಿದ್ದಾರೆ. 
ಜು.17ರಿಂದ ಆರಂಭವಾಗುತ್ತಿರುವ ಸಂಸತ್ ಮುಂಗಾರು ಅಧಿವೇಶನದಲ್ಲಿ ಜಿಎಸ್ ಟಿ ಮಸೂದೆ, ನೋಟು ನಿಷೇಧ ವಿಚಾರ ಸೇರಿದಂತೆ ದೇಶದಲ್ಲಿ ಎದುರಾಗಿರುವ ಇನ್ನಿತರೆ ಸಮಸ್ಯೆಗಳ ಕುರಿತಂತೆ ಸರ್ಕಾರದ ವಿರುದ್ಧ ಟೀಕಾಸ್ತ್ರ ನಡೆಸಲು ವಿರೋಧ ಪಕ್ಷಗಳು ಸಿದ್ಧತೆ ನಡೆಸಿವೆ. ಸಂಸತ್ತು ಕಲಾಪ ಸುಗಮವಾಗಿ ನಡೆಯಬೇಕೆಂಬ ಉದ್ದೇಶ ಹಿನ್ನಲೆಯಲ್ಲಿ ಕಳೆದ ಎರಡು ದಿನಗಳಿಂದ ವಿರೋಧ ಪಕ್ಷಗಳ ನಾಯಕರೊಂದಿಗೆ ಸಭೆ ನಡೆಸಿರುವ ಕೇಂದ್ರ ಸರ್ಕಾರ ಡೋಕ್ಲಾಮ್ ವಿವಾದ ಹಾಗೂ ಜಮ್ಮು ಮತ್ತು ಕಾಶ್ಮೀರದಲ್ಲಿ ಉಂಟಾಗಿರುವ ಉದ್ವಿಗ್ನ ಪರಿಸ್ಥಿತಿ ಕುರಿತಂತೆ ಚರ್ಚೆ ನಡೆಸಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com