ಅಮರನಾಥ ಯಾತ್ರಿಕರ ಬಸ್ ದುರಂತ: 16 ಸಾವು; ಪ್ರಧಾನಿ ಮೋದಿ ಸಂತಾಪ

ಜಮ್ಮು ಮತ್ತು ಕಾಶ್ಮೀರದ ಹೆದ್ದಾರಿಯಲ್ಲಿ ಅಮರನಾಥ ಯಾತ್ರಿಕರಿದ್ದ ಖಾಸಗಿ ಬಸ್ ಕಂದಕಕ್ಕೆ ಉರುಳಿದ್ದು 16 ಮಂದಿ ದಾರುಣ ಸಾವನ್ನಪ್ಪಿದ್ದಾರೆ...
ಪ್ರಧಾನಿ ನರೇಂದ್ರ ಮೋದಿ
ಪ್ರಧಾನಿ ನರೇಂದ್ರ ಮೋದಿ
ಜಮ್ಮು ಮತ್ತು ಕಾಶ್ಮೀರ: ಜಮ್ಮು ಮತ್ತು ಕಾಶ್ಮೀರದ ಹೆದ್ದಾರಿಯಲ್ಲಿ ಅಮರನಾಥ ಯಾತ್ರಿಕರಿದ್ದ ಖಾಸಗಿ ಬಸ್ ಕಂದಕಕ್ಕೆ ಉರುಳಿದ್ದು 16 ಮಂದಿ ದಾರುಣ ಸಾವನ್ನಪ್ಪಿದ್ದಾರೆ. 
ಜಮ್ಮು ಮತ್ತು ಕಾಶ್ಮೀರದ ರಾಂಬನ್ ಎಂಬಲ್ಲಿ ಬಸ್ ಕಂದಕಕ್ಕೆ ಉರುಳಿದೆ. ಈ ಅಪಘಾತದಲ್ಲಿ ಸ್ಥಳದಲ್ಲೇ 16 ಮಂದಿ ಸಾವನ್ನಪ್ಪಿದ್ದು 27 ಮಂದಿಗೆ ಗಂಭೀರ ಗಾಯಗಳಾಗಿವೆ. ಇನ್ನು ಗಾಯಗೊಂಡವರಲ್ಲಿ ಹಲವರ ಪರಿಸ್ಥಿತಿ ಗಂಭೀರವಾಗಿದ್ದು ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ. ಇನ್ನು ಸ್ಥಳೀಯ ಪೊಲೀಸರು ಮತ್ತು ಭಾರತೀಯ ಸೇನೆಯ ಯೋಧರು ರಕ್ಷಣಾ ಕಾರ್ಯಾಚರಣೆ ನಡೆಸಿ ಬಸ್ ನಲ್ಲಿ ಸಿಲುಕಿಕೊಂಡಿರುವವರ ರಕ್ಷಣೆ ಮಾಡಿದ್ದಾರೆ. 
ಅಮರನಾಥ ಯಾತ್ರಿಕರ ಬಸ್ ದುರಂತಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಸಂತಾಪ ಸೂಚಿಸಿದ್ದಾರೆ. ಮೃತರ ಕುಟುಂಬಗಳಿಗೆ ಈ ನೋವನ್ನು ತಡೆದುಕೊಳ್ಳುವ ಶಕ್ತಿ ಆ ಭಗವಂತ ಕರುಣಿಸಲಿ. ಅಪಘಾತದಲ್ಲಿ ಗಾಯಗೊಂಡಿರುವವರು ಶೀಘ್ರವಾಗಿ ಗುಣಮುಖರಾಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಮೋದಿ ಟ್ವೀಟ್ ಮಾಡಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com