ಮೀರಾ ಪರ ಅಖಿಲೇಶ್, ಕೋವಿಂದ್ ಪರ ಮುಲಾಯಂ: ರಾಷ್ಟ್ರಪತಿ ಚುನಾವಣೆ ಸಂಬಂಧ ಸಮಾಜವಾದಿ ಪಕ್ಷದಲ್ಲಿ ಒಡಕು!

Published On :
ಲಖನೌ: ರಾಷ್ಟ್ರಪತಿ ಚುನಾವಣೆ ಸಂಬಂಧ ಸಮಾಜವಾದಿ ಪಕ್ಷದಲ್ಲಿ ಒಡಕು ಮೂಡಿದ್ದು, ಅಖಿಲೇಶ್ ಯಾದವ್ ಬಣ ಯುಪಿಎ ಅಭ್ಯರ್ಥಿ ಮೀರಾ ಕುಮಾರ್ ಗೆ ಬೆಂಬಲ ಸೂಚಿಸಲು ಚಿಂತನೆ ನಡೆಸಿದ್ದರೆ, ಮುಲಾಯಂ ಸಿಂಗ್ ಯಾದವ್ ಎನ್ ಡಿಎ ಅಭ್ಯರ್ಥಿ ರಾಮ್ ನಾಥ್ ಕೋವಿಂದ್ ಅವರನ್ನು ಬೆಂಬಲಿಸಲು ನಿರ್ಧರಿಸಿದ್ದಾರೆ.
ಸಮಾಜವಾದಿ ಪಕ್ಷದಲ್ಲಿ ರಾಷ್ಟ್ರಪತಿ ಚುನಾವಣೆಗೆ ಸಂಬಂಧಿಸಿದಂತೆ ಒಡಕು ಮೂಡಿರುವುದರಿಂದ ಅಡ್ದ ಮತದಾನ ನಡೆಯುವ ಸಾಧ್ಯತೆಗಳಿದ್ದು, ರಾಷ್ಟ್ರಪತಿ ಚುನಾವಣೆಯ ಫಲಿತಾಂಶದ ಮೇಲೆ ಹೆಚ್ಚಿನ ಪರಿಣಾಮ ಬೀರದೇ ಇದ್ದರೂ ಸಮಾಜವಾದಿ ಪಕ್ಷದ ಆಂತರಿಕ ಕಲಹವನ್ನು ಮತ್ತಷ್ಟು ಹೆಚ್ಚಿಸುತ್ತದೆ ಎಂದು ವಿಶ್ಲೇಷಿಸಲಾಗುತ್ತಿದೆ.
ಎನ್ ಡಿಎ ರಾಷ್ಟ್ರಪತಿ ಘೋಷಣೆಯಾಗುತ್ತಿದ್ದಂತೆಯೇ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಅವರು ಆಯೋಜಿಸಿದ್ದ ಔತಣ ಕೂಟದಲ್ಲಿ ಭಾಗವಹಿಸುವ ಮೂಲಕ ಮುಲಾಯಂ ಸಿಂಗ್ ಯಾದವ್ ರಾಮನಾಥ್ ಕೋವಿಂದ್ ಗೆ ಬೆಂಬಲ ನೀಡುವ ಬಗ್ಗೆ ಸುಳಿವು ನೀಡಿದ್ದರು.
ಇತ್ತ ಅಖಿಲೇಶ್ ಯಾದವ್ ಯುಪಿಎ ಅಭ್ಯರ್ಥಿ ಮೀರಾ ಕುಮಾರ್ ಅವರನ್ನು ಬೆಂಬಲಿಸುವ ಸಾಧ್ಯತೆ ಹೆಚ್ಚಿದ್ದು, ಸಮಾಜವಾದಿ ಪಕ್ಷದಲ್ಲಿ ಒಡಕು ಮೂಡಿರುವುದು ಸ್ಪಷ್ಟವಾದಂತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಮುಲಾಯಂ ಸಿಂಗ್ ಯಾದವ್Mulayam Singh Yadavಸಮಾಜವಾದಿ ಪಕ್ಷSamajwadi PartyAkhilesh Yadavಅಖಿಲೇಶ್ ಯಾದವ್presidential electionರಾಷ್ಟ್ರಪತಿ ಚುನಾವಣೆ
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


