ಉಪ ರಾಷ್ಟ್ರಪತಿ ಚುನಾವಣೆ: ಎನ್ ಡಿಎ ಅಭ್ಯರ್ಥಿಯಾಗಿ ವೆಂಕಯ್ಯ ನಾಯ್ಡು ಕಣಕ್ಕೆ

ಉಪ ರಾಷ್ಟ್ರಪತಿ ಚುನಾವಣೆಯಲ್ಲಿ ದಕ್ಷಿಣ ಭಾರತದ ಪ್ರಭಾವಿ ಬಿಜೆಪಿ ನಾಯಕ ಕೇಂದ್ರ ನಗರಾಭಿವೃದ್ಧಿ ಸಚಿವ ಎಂ ವೆಂಕಯ್ಯ ನಾಯ್ಡು ಅವರನ್ನು ಎನ್ ಡಿಎ ಅಭ್ಯರ್ಥಿಯಾಗಿ....
ವೆಂಕಯ್ಯ ನಾಯ್ಡು
ವೆಂಕಯ್ಯ ನಾಯ್ಡು
Updated on
ನವದೆಹಲಿ: ಉಪ ರಾಷ್ಟ್ರಪತಿ ಚುನಾವಣೆಯಲ್ಲಿ ದಕ್ಷಿಣ ಭಾರತದ ಪ್ರಭಾವಿ ಬಿಜೆಪಿ ನಾಯಕ ಕೇಂದ್ರ ನಗರಾಭಿವೃದ್ಧಿ ಸಚಿವ ಎಂ ವೆಂಕಯ್ಯ ನಾಯ್ಡು ಅವರನ್ನು ಎನ್ ಡಿಎ ಅಭ್ಯರ್ಥಿಯಾಗಿ ಕಣಕ್ಕಿಳಿಸಲು ಸೋಮವಾರ ಬಿಜೆಪಿ ನಿರ್ಧರಿಸಿದೆ.
ಇಂದು ಸಂಜೆ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ನಡೆದ ಬಿಜೆಪಿ ಸಂಸದೀಯ ಮಂಡಳಿ ಸಭೆಯಲ್ಲಿ ವೆಂಕಯ್ಯ ನಾಯ್ಡು ಅವರನ್ನು ಎನ್ ಡಿಎ ಉಪ ರಾಷ್ಟ್ರಪತಿ ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಲಾಗಿದೆ.
ಸಂಸದೀಯ ಮಂಡಳಿಯ ಸಭೆಯ ಬಳಿಕ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರು, ಉಪ ರಾಷ್ಟ್ರಪತಿ ಚುನಾವಣೆಗೆ ಎನ್ ಡಿಎ ಅಭ್ಯರ್ಥಿಯಾಗಿ ಎಂ ವೆಂಕಯ್ಯ ನಾಯ್ಡು ಅವರನ್ನು ಆಯ್ಕೆ ಮಾಡಲಾಗಿದ್ದು, ಅವರು ನಾಳೆ ನಾಮ ಪತ್ರ ಸಲ್ಲಿಸಲಿದ್ದಾರೆ ಎಂದು ತಿಳಿಸಿದ್ದಾರೆ.
ಉಪ ರಾಷ್ಟ್ರಪತಿ ಚುನಾವಣೆಗೆ ನಾಮಪತ್ರ ಸಲ್ಲಿಸಲು ಮಂಗಳವಾರ  ಕೊನೆಯ ದಿನವಾಗಿದ್ದು, ಆಗಸ್ಟ್ 5ರಂದು ಮತದಾನ ನಡೆಯಲಿದೆ ಮತ್ತು ಅಂದೇ ಫಲಿತಾಂಶ ಸಹ ಪ್ರಕಟಗೊಳ್ಳಲಿದೆ. ಸದ್ಯ ಉಪ ರಾಷ್ಟ್ರಪತಿಯಾಗಿ ಕಾರ್ಯನಿರ್ವಹಿಸುತ್ತಿರುವ ಹಮೀದ್‌ ಅನ್ಸಾರಿ ಅವರ ಅಧಿಕಾರ ಅವಧಿ ಆಗಸ್ಟ್‌ 10ಕ್ಕೆ ಕೊನೆಗೊಳ್ಳಲಿದೆ.
ಸುಮಾರು 25 ವರ್ಷಗಳ ರಾಜಕೀಯ ಅನುಭವ ಹೊಂದಿರುವ ವೆಂಕಯ್ಯ ನಾಯ್ಡು ಅವರು ನಾಲ್ಕು ಬಾರಿ ರಾಜ್ಯಸಭೆಗೆ ಆಯ್ಕೆಯಾಗಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com